ಬಾಗಲಕೋಟೆ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಗೆ ಆಗಮಿಸಿದ ಸಶಸ್ತ್ರ ಸೀಮಾ ಬಲ ಮತ್ತು ಪೊಲೀಸ್ ಪಡೆಯಿಂದ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ನವನಗರದ ನಾನಾ ಕಡೆಗಳಲ್ಲಿ ಸೋಮವಾರ ಪಥ ಸಂಚಲನ ನಡೆಸಲಾಯಿತು.
ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಜಿಲ್ಲಾಽಕಾರಿ ಪಿ.ಸುನೀಲ್‌ಕುಮಾರ ಸಶಸ್ತ್ರ ಸೀಮಾ ಬಲದ ಪಥ ಸಂಚಲನಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಪಥ ಸಂಚಲನ ಜಿಲ್ಲಾಡಳಿತ ಭವನದ ಮುಖ್ಯ ಆವರಣದಿಂದ ಹೊರಟು ನವನಗರದ ನಾನಾ ಕಡೆಗಳಲ್ಲಿ ಸಂಚರಿಸಿತು. ಪಥ ಸಂಚಲನ ತಹಸೀಲ್ದಾರ ಕಾರ್ಯಾಲಯದ ಮುಂದೆ ಆಗಮಿಸಿದಾಗ ಪುಷ್ಪಗಳ ಸುರುಮಳೆಗೈದರು. ಪಥ ಸಂಚಲನದಲ್ಲಿ ಕಮಾಂಡೋ ಹಾಗೂ ಪೊಲೀಸ್ ಪಡೆ ಸೇರಿ ೧೨೦ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಜಯಪ್ರಕಾಶ ಹಕ್ಕರಕಿ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ, ಡಿವೈಎಸ್‌ಪಿ ಪ್ರಶಾಂತ ಮನ್ನೋಳ್ಳಿ, ತಹಸೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಇತರರು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಪೂರ್ವದಲ್ಲಿ ಸಶಸ್ತ್ರ ಸೀಮಾ ಬಲದ ಕಮಾಂಡೋ ಅಽಕಾರಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾಽಕಾರಿಗಳು ಸ್ವಾಗತಿಸಿದರು.