ಜಿಲ್ಲೆ

ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಕರೆ

Mysuru - Desk - Ravikumar

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ಪಶುಚಿಕಿತ್ಸಾಲಯದ ಆವರಣದಲ್ಲಿ ಶನಿವಾರ 20 ಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆ ಬಗ್ಗೆ ಕಾಳಜಿ ಮೆರೆಯಲಾಯಿತು.


ಮುಖ್ಯಪಶುವೈದ್ಯಾಧಿಕಾರಿ ಡಾ. ಮಾದೇಶ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವ ಮೂಲಕ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.


ಕಾರ್ಯಕ್ರಮದಲ್ಲಿ ಡಾ.ಮನೋಹರ್, ನೌಕರ ಬಾಲಸುಬ್ರಹ್ಮಣ್ಯ, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ವಿ.ಎಸ್. ಸುಂದರ್ ಹಾಗೂ ಸಾರ್ವಜನಿಕರು ಇದ್ದರು.