ಕಾಸರಬೊಸಗಾ ಗ್ರಾಮದಲ್ಲಿ ಸಹಕಾರ ಸಂಘಗಳಿಂದ ರೈತರಿಗೆ ಬಡ್ಡಿ ರಹಿತ ಸಾಲದ ಚೆಕ್ ವಿತರಿಸಲಾಯಿತು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮುಖಂಡರಾದ ಧರ್ಮಣ್ಣ ದೊಡಮನಿ, ಹಳ್ಳೆಪ್ಪಾಚಾರ್ಯ ಜೋಶಿ, ರೇವಣಸಿದ್ದಪ್ಪ ಸಂಕಾಲಿ, ಸಾಯಬಣ್ಣ ದೊಡಮನಿ ಇದ್ದರು. 
ಜಿಲ್ಲೆ

ಸಹಕಾರ ಸಂಘಗಳ ಲಾಭ ಪಡೆದುಕೊಳ್ಳಿ

ಯಡ್ರಾಮಿ (ಕಲಬುರಗಿ): ರೈತರು ಆರ್ಥಿಕವಾಗಿ ಸಬಲರಾಗಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಹೇಳಿದರು.

ಕಾಸರಬೊಸಗಾದಲ್ಲಿ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಮುತ್ತಕೋಡ, ಕಾಸರಬೊಸಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ರೈತರಿಗೆ ಬಡ್ಡಿ ರಹಿತ ಸಾಲದ ಚೆಕ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆಗೆ ಅನುಕೂಲ ಆಗುವ ದೃಷ್ಟಿಯಿಂದ ಮೊಟ್ಟ ಮೊದಲ ಬಾರಿಗೆ ನೇರವಾಗಿ ಹಳ್ಳಿಗಳಿಗೆ ತೆರಳಿ ಚೆಕ್ ವಿತರಿಸುವ ಕಾರ್ಯಕ್ರಮ ನಡೆಯುತ್ತಿದೆ. ರೈತರು ಸಾಲವರು ಕಾಲಮಿತಿಯೊಳಗೆ ಮರುಪಾವತಿ ಮಾಡಬೇಕು ಎಂದು ಕೋರಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಧರ್ಮಣ್ಣ ದೊಡಮನಿ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಹಳ್ಳೆಪ್ಪಾಚಾರ್ಯ ಜೋಶಿ, ಪ್ರಮುಖರಾದ ರೇವಣಸಿದ್ದಪ್ಪ ಸಂಕಾಲಿ, ಸಾಯಬಣ್ಣ ದೊಡಮನಿ, ಬಾಪುಗೌಡ ಮಾಲಿಪಾಟೀಲ್, ಶಬ್ಬರ್ಖಾನ್ ನಾಡಗೌಡ, ಬಾಬು ಮುತ್ತಕೋಡ, ರಾಜಶೇಖರ ಮುತ್ತಕೋಡ, ಅಣ್ಣಾರಾಯ ಮಲ್ಲೇದ್, ಮಲ್ಲಣ್ಣ ಕಾಸಪ್ಪನವರ್ ಇತರರಿದ್ದರು.