ಜಿಲ್ಲೆ

ಸಹಕಾರಿ ಬ್ಯಾಂಕ್ ದೋಚಿದ ಕಳ್ಳರು

ನರಗುಂದ: ಪಟ್ಟಣದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​ನಲ್ಲಿಟ್ಟಿದ್ದ 1. 49 ಲಕ್ಷ ರೂ. ಕಳ್ಳತನವಾದ ಘಟನೆ ಮಂಗಳವಾರ ತಡವಾಗಿ ಬೆಳಕಿಗೆ ಬಂದಿದೆ.

ಪಟ್ಟಣದ ತೋಟದಕೆರೆ ಪಕ್ಕದ ಹಳೇ ಎಪಿಎಂಸಿ ಆವರಣದಲ್ಲಿರುವ ಸಹಕಾರಿ ಬ್ಯಾಂಕ್ ಪ್ರತಿನಿತ್ಯ ಕಾರ್ಯ ನಿರ್ವಹಿಸುತ್ತಿತ್ತು. ಆದರೆ, ಭಾನುವಾರ ಮತ್ತು ಸೋಮವಾರ ಬ್ಯಾಂಕ್​ಗೆ ರಜೆ ಇರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಬಂದಿರಲಿಲ್ಲ. ಈ ವೇಳೆ ಬ್ಯಾಂಕ್ ಹಿಂಬದಿ ಕಿಟಕಿ ಮುರಿದು ಒಳಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 10 ಗಂಟೆಗೆ ಬ್ಯಾಂಕ್ ವ್ಯವಸ್ಥಾಪಕ ಉಮೇಶಗೌಡ ಪಾಟೀಲ ಕರ್ತವ್ಯಕ್ಕೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.