ಗೋಣಿಕೊಪ್ಪದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಆರೋಗ್ಯ ಅರಿವು ಕಾರ್ಯಾಗಾರವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಉದ್ಘಾಟಿಸಿದರು. ಕೆ.ಎಂ.ಸತೀಶ್ ಕುಮಾರ್, ಯತಿರಾಜ್ ಮತ್ತಿತರರು ಉಪಸ್ಥಿತರಿದ್ದರು. 
ಜಿಲ್ಲೆ

ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು

ಗೋಣಿಕೊಪ್ಪ: ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆಯೇ ಮದ್ದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿರಾಜಪೇಟೆ ತಾಲೂಕು ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆ ಹಾಗೂ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿ ಸಂಯುಕ್ತಾಶ್ರಯದಲ್ಲಿ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಹಭಾಗಿತ್ವ ಕುರಿತು ತಾಲೂಕು ಮಟ್ಟದ ಶಿಕ್ಷಕರಿಗೆ ಶುಕ್ರವಾರ ಆಯೋಜಿಸಿದ್ದ ಅಡ್ವೊಕೆಸಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಸೊಳ್ಳೆಗಳ ನಿಯಂತ್ರಣ ಮಾಡಲು ನವೀನ ವಿಧಾನವನ್ನು ಅಳವಡಿಸಿ ಅನುಷ್ಠಾನಗೊಳಿಸುವ ಮೂಲಕ 2025 ರ ವೇಳೆಗೆ ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಆರೋಗ್ಯ ಇಲಾಖೆ ಕಾರ್ಯಯೋಜನೆ ರೂಪಿಸಿಕೊಂಡಿದೆ. ಜಿಲ್ಲೆಯಲ್ಲಿ ಪ್ರಸ್ತುತದಲ್ಲಿ 92 ಡೆಂೆ ಪ್ರಕರಣಗಳು ವರದಿಯಾಗಿದ್ದು, ಮಳೆ ಕ್ಷೀಣಿಸಿದಂತೆ ಡೆಂೆಯೂ ರೋಗವೂ ಕ್ರಮೇಣವಾಗಿ ಕ್ಷೀಣಿಸಿದೆ ಎಂದರು.

ಶಿಕ್ಷಕರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಕ್ಕಳು ಹಾಗೂ ಸಮುದಾಯದಲ್ಲಿ ಅರಿವು ಮೂಡಿಸುವ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಬೇಕು ಎಂದರು.

ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಸಾಂಕ್ರಾಮಿಕ ರೋಗ ಹರಡುವ ಬಗ್ಗೆ ಹಾಗೂ ಇವುಗಳನ್ನು ತಡೆಗಟ್ಟಲು ಕೈಗೊಳ್ಳುವ ಕುರಿತು ಅವರಲ್ಲಿ ಆರೋಗ್ಯ ಅರಿವು ಮೂಡಿಸುವ ಮೂಲಕ ಸಮುದಾಯದಲ್ಲಿ ಆರೋಗ್ಯ ಅರಿವು ಮೂಡಿಸಬೇಕು. ಜಿಲ್ಲಾ ಕಸಾಪ ವತಿಯಿಂದ ಶಾಲಾ ಮಕ್ಕಳಿಗೆ ಕನ್ನಡ ಪರ ಚಟುವಟಿಕೆಗಳೊಂದಿಗೆ ಆರೋಗ್ಯ, ವೈದ್ಯಕೀಯ ಕ್ಷೇತ್ರಕ್ಕೆ ಪೂರಕವಾದ ವಿವಿಧ ಕಾರ್ಯಕ್ರಮಗಳನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್ ಮಾತನಾಡಿ, ರೋಗಗಳ ಹರಡುವಿಕೆ ಮತ್ತು ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಯತಿರಾಜ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ , ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ವನಜಾಕ್ಷಿ, ಕಿರಿಯ ಆರೋಗ್ಯ ನಿರೀಕ್ಷಕ ಎಂ.ಪಿ.ಶಶಿಕಾಂತ್, ಕಾರ್ಯಾಗಾರದ ಸಂಯೋಜಕ ಜಿ.ಶ್ರೀಹರ್ಷ, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಮಹೇಶ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಅನ್ರಿತಾ ಫುರ್ಟಾಡೋ ಇತರರು ಇದ್ದರು. 11 ಜಿಕೆಪಿ