ಚಿತ್ರದುರ್ಗ: ಸಾಂಕ್ರಾಮಿಕ ರೋಗಗಳು ಸೇರಿದಂತೆ ಪ್ರಾಣಿ,ಕೀಟ ಜನ್ಯ ರೋಗಗಳ ಹರಡುವಿಕೆ ತಡೆಗೆ ಜಿಲ್ಲಾ ಕಣ್ಗಾವಲು ಸಮಿತಿ ಹೆಚ್ಚಿನ ನಿಗಾ ವ ಹಿಸಬೇಕೆಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು. ಡಿಸಿ ಕಚೇರಿಯಲ್ಲಿ ಶುಕ್ರವಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಾಂಕ್ರಮಿಕ ರೋಗಗಳನ್ನು ಬಹು ಬೇಗ ಪತ್ತೆ ಹಚ್ಚಿದರೆ, ಸಮುದಾಯದಲ್ಲಿ ರೋಗ ಹರಡುವಿಕೆಯನ್ನು ತಡೆಗಟ್ಟಬಹುದು.
ಕಲುಷಿತ ನೀರಿನ ಸೇವನೆಯಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುವ ಪ್ರಕರಣಗಳನ್ನು ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಸ್ವ ಚ್ಛತೆ,ಶುದ್ಧ ಕುಡಿಯುವ ನೀರಿನ ಸರಬರಾಜಿನ ವ್ಯತ್ಯಯ ಉಂಟಾಗಿದ್ದರೆ, ಸ್ಥಳೀಯ ಸಂಸ್ಥೆಗಳ ಕೂಡಲೇ ಗಮನ ಹರಿಸಿ ಸಮಸ್ಯೆ ಬಗೆ ಹರಿ ಸಬೇಕು.
ಜಿಲ್ಲೆಯಲ್ಲಿ ಈವರೆಗೆ 294 ಹಾವು ಕಡಿತದ ಪ್ರಕರಣಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಜನರಿಗೆ,ವಿದ್ಯಾರ್ಥಿಗಳಿಗೆ ಹಾವು ಕಡಿತದಂತಹ ಸಂದರ್ಭದಲ್ಲಿ ನೀಡಬೇಕಾದ ಪ್ರಥಮ ಚಿಕಿತ್ಸೆ ಹಾಗೂ ತಕ್ಷಣವೇ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಾವು ಕಚ್ಚಿದವರನ್ನು ದಾ ಖಲಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ನಾಯಿ ಕಡಿತ ಪ್ರಕರಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿಯೇ ಹಾಗೂ ಚುಚ್ಚು ಮದ್ದು ನೀಡಬೇಕೆಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ್‌ಕಂಬಾಳಿ ಮಠ,ಡಿಡಿಪಿಐ ಎಂ.ಆರ್.ಮಂಜುನಾಥ್,ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್‌ನಾಗಸಮುದ್ರ, ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್,ತಾಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಮತ್ತಿತರರು ಇದ್ದರು.