ಜಿಲ್ಲೆ

ಸಾಂಸ್ಕೃತಿಕ ಕಲಾ ಪರಿಷತ್‌ ಉದ್ಘಾಟನೆ

ಚಿತ್ರದುರ್ಗ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಚಿತ್ರದುರ್ಗದ ಐಎಂಎ ಹಾಲ್‌ನಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಕವಿಗೋಷ್ಠಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ, ಕರ್ನಾಟಕ ರತ್ನ ಡಾ.ರಾಜ್‌ಕುಮಾರ್ ಸಾಂಸ್ಕೃತಿಕ ಕಲಾ ಪರಿಷತ್ ಅನ್ನು ಕಸಾಪ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಉದ್ಘಾಟಿಸಿದರು.

ಶಿರಸಿ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಡಾ.ಎಚ್.ಶಿವಣ್ಣ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಪರಿಷತ್ ಅಧ್ಯಕ್ಷ ಕೆ.ಪರಶುರಾಮ್ ಗೊರಪ್ಪರ್, ಡಯಟ್ ಹಿರಿಯ ಉಪನ್ಯಾಸಕ ರಾಘವೇಂದ್ರ, ಕೆ.ಬಿ.ಕೃಷ್ಣಪ್ಪ, ಆರ್.ತಿಪ್ಪೇಸ್ವಾಮಿ, ಪಿಎಸ್‌ಐ ಜಿ.ಯಶೋಧಮ್ಮ, ಕಿರುತೆರೆ ನಟಿ ಇಂದ್ರ ಸುಧಾ ಇತರರಿದ್ದರು.