ಜಿಲ್ಲೆ

ಸಾಂಸ್ಕೃತಿಕ ನಗರಿಯಲ್ಲೂ ಕಟ್ಟೆಚ್ಚರ

ಮೈಸೂರು: ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.


ಬೆಂಗಳೂರಿನಲ್ಲಿ ಸರಣಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಭಾರಿ ಅನಾಹುತ ಎಸಗಲು ಯೋಜನೆ ರೂಪಿಸಿದ್ದ ಸ್ಫೋಟಕ ಮಾಹಿತಿ ವಿಚಾರಣೆ ವೇಳೆ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡಿದ್ದಾರೆ.


ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪೊಲೀಸ್ ಆಯುಕ್ತ ಬಿ.ರಮೇಶ್ ಅವರ ಸೂಚನೆ ಮೇರೆಗೆ ರಾತ್ರಿ ಗಸ್ತು ಇನ್ನಷ್ಟು ಬಿಗಿಗೊಳಿಸಲಾಗಿದೆ. ಉದಯಗಿರಿ ಠಾಣೆ ಪೊಲೀಸರಿಂದ ನೈಟ್ ಬೀಟ್ ಮತ್ತಷ್ಟು ಚುರುಕುಗೊಂಡಿದೆ. ಕಿಡಿಗೇಡಿಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದರೆ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.