ಜಿಲ್ಲೆ

ಸಾಧಕರಿಗೆ 13ರಂದು ಮೇರುಗಿರಿ ಪ್ರಶಸ್ತಿ

ಮೈಸೂರು: ನಟರಾಜ ಪ್ರತಿಷ್ಠಾನ ಮತ್ತು ವೆಂಕಟಗಿರಿ ಪ್ರಕಾಶನ ಸಹಯೋಗದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಮೇರುಗಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸೆ.13ರ ಬೆಳಗ್ಗೆ 10.30ಕ್ಕೆ ಹೊಸಮಠದ ನಟರಾಜ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸುವರು. ಯೋಗಾನರಸಿಂಹಸ್ವಾಮಿ ದೇವಸ್ಥಾನ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮಿ, ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಎಲ್.ನಾಗೇಂದ್ರ, ಸಂಸದ ಪ್ರತಾಪ್‌ಸಿಂಹ, ಮೇಯರ್ ಶಿವಕುಮಾರ್ ಪಾಲ್ಗೊಳ್ಳುವರು. ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ನೀ.ಗಿರಿಗೌಡ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಶಸ್ತಿ ಪುರಸ್ಕೃತರು:
ಮಹಾರಾಜ ಸಂಸ್ಕೃತ ಕಾಲೇಜು ಪ್ರಾಂಶುಪಾಲ ಡಾ.ಕೆ.ಎಂ.ಮಹದೇವಯ್ಯ, ಸಂಸ್ಕೃತಿ ಚಿಂತಕ ಕೆ.ರಘುರಾಮ್ ವಾಜಪೇಯಿ, ಡಾ.ಕೆ.ಜಿ.ಪುಟ್ಟಹೊನ್ನಯ್ಯ, ಡಾ.ಸಿ.ನಂಜುಂಡಯ್ಯ, ನಾಗರತ್ಮ ಹೆಮ್ಮಿಗೆ, ಕೇಬಲ್ ವೆಂಕಟೇಶ್, ಡಾ.ಬಿ.ಅನಸೂಯಾ, ಮಲ್ಲಣ್ಣ, ಎಸ್.ಕೃಷ್ಣಮೂರ್ತಿ, ರಾಘವೇಂದ್ರ, ಡಾ.ಸುನಂದಾ ಬೂಪಾಲಿ ಮತ್ತು ಚಂದ್ರಶೇಖರಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.