ಜಿಲ್ಲೆ

ಸಾಧಕರಿಗೆ ಪ್ರಶಸ್ತಿ ಪ್ರದಾನ

ಎ.ಎಸ್.ಮಣಿಕಂಠ

ಚಾಮರಾಜನಗರ: ಜಾನಪದ, ರಂಗಭೂಮಿ, ಕಲೆ, ಕ್ರೀಡಾಕ್ಷೇತ್ರ, ಚಿತ್ರಕಲೆ, ವಿಜ್ಞಾನ, ಪರಿಸರ ಸಂರಕ್ಷಣೆ, ಪತ್ರಿಕೋದ್ಯಮ, ಕೃಷಿ ಆಧಾರಿತ ಕೈಗಾರಿಕೆ, ಸೋಬಾನೆ ಹಾಗೂ ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ಸಾಧನೆ ಮಾಡಿದ 21 ಜನರನ್ನು ಸನ್ಮಾನಿಸಲಾಯಿತು. ಅದಲ್ಲದೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 125 ಕ್ಕೆ 125 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲೇ ನಗರಸಭೆ ವತಿಯಿಂದ ಅರ್ಹ ಪೌರಕಾರ್ಮಿಕರಿಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಲಾಯಿತು.

ಖಾಲಿ ಕುರ್ಚಿಗಳ ದರ್ಶನ:

ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ 69ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದೇ, ಖಾಲಿ ಕುರ್ಚಿಗಳ ದರ್ಶನವಾಯಿತು. ಈ ಹಿಂದೆ ರಾಷ್ಟ್ರೀಯ ಹಬ್ಬಗಳು ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿತ್ತು. ಸಾರ್ವಜನಿಕರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಆದರೇ ಇತ್ತೀಚೆಗೆ ಈ ಕಾರ್ಯಕ್ರಮಗಳನ್ನು ಜಿಲ್ಲಾ ಪೊಲೀಸ್ ಪೆರೇಡ್ ಮೈದಾನಕ್ಕೆ ವರ್ಗಾಹಿಸಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿಲ್ಲ. ಆಗಾಗಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಅಧಿಕಾರಿಗಳ ಕೊರತೆಯೂ ಕಂಡುಬಂದಿತು.