ಜಿಲ್ಲೆ

ಸಾಧನೆಗೆ ಅಂಗವಿಕಲತೆ ಅಡ್ಡಿಯಾಗದು,ನ್ಯಾ.ವಿಜಯ್

ಡಿ.ಪಿ.ನಾಗರಾಜ ಶ್ರೇಷ್ಠಿ


ಚಿತ್ರದುರ್ಗ:ಅಚಲ ನಿರ್ಧಾರ, ಆತ್ಮವಿಶ್ವಾಸ, ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವಿದ್ದಲ್ಲಿ ಸಾಧನೆಗೆ ಅಂಗವಿಕಲತೆ ಅಡ್ಡಿಯಾಗದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ,ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಹೇಳಿದರು.
ಜಿಲ್ಲಾಡಳಿತ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ವಿಶ್ವ ಅಂಗ ವಿಕಲರ ದಿನಾಚರಣೆ ಅಂಗವಾಗಿ ಗುರುವಾರ ಏರ್ಪಡಿಸಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅನೇಕ ಅಂಗವಿಕಲರು ಐಎಎಸ್‌ನಂಥ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸ್ ಮಾಡಿದ್ದಾರೆ. ಪ್ಯಾರಾ ಒಲಂಪಿಕ್ ಕ್ರೀಡಾಕೂಟದ ಲ್ಲೂ ಉತ್ತಮ ಸಾಧನೆ ತೋರಿದ್ದಾರೆ. ಆದ್ದರಿಂದ ಗುರಿ ಸಾಧನೆ ಮಾಡಬೇಕು ಎಂದು ಛಲವಿರಬೇಕೆಂದರು. ಮಹಿಳಾ ಮತ್ತು ಮಕ್ಕಳ ಅ ಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ವಿಜಯ್‌ಕುಮಾರ್ ಮಾತನಾಡಿದರು.
ಮಡಕೆ ಒಡೆಯುವುದು, ಕೇನ್‌ರೇಸ್, 100ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ, ಗುಂಡು ಎಸೆತ, ಜಾವಲಿನ್ ಥ್ರೋ. ಬ ಕೆಟ್‌ನಲ್ಲಿ ರಿಂಗ್‌ಎಸೆತ, ಮ್ಯೂಜಿಕಲ್ ಚೇರ್ ಇತ್ಯಾದಿ ಹಾಗೂ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎ.ಎಂ.ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿ ತ್ರಾ, ಶಿಕ್ಷಣ ಇಲಾಖೆ ಅಧಿಕಾರಿ ಚಿದಾನಂದ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಯಣ್ಣ ಮತ್ತಿತರರು ಇದ್ದರು.