ಜಿಲ್ಲೆ

ಸಾಮಾಜಿಕ ಜಾಲದಲ್ಲಿ ಅವಹೇಳನಕ್ಕೆ ಕಡಿವಾಣ

ಕಲಬುರಗಿ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಸುದ್ದಿ ಪ್ರಸಾರ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡುವುದಕ್ಕೆ ಕಡಿವಾಣ ಹಾಕಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಕಾನೂನು ಬದ್ಧವಾಗಿಯೆ ಇದು ಜಾರಿಗೆ ತರಲಾಗುವುದು ಎಂದು ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.