ಯಾದಗಿರಿ: ಗ್ರಾಮೀಣ ಭಾಗದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಪಂಚಾಯಿತಿ ವ್ಯವಸ್ಥೆಯಲ್ಲಿನ ಸೌಲಭ್ಯಗಳನ್ನು ಸದಸ್ಯರು ಪಡೆದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಪಂ ಇಒ ಬಸವರಾಜ ಶರಬೈ ಸಲಹೆ ನೀಡಿದರು.
ಮಂಗಳವಾರ ನಗರದ ತಾಪಂ ಸಭಾಂಗಣದಲ್ಲಿ ತಾಲೂಕಿನ ಗ್ರಾಪಂಗಳ ಸ್ಥಾಯಿ ಸಮಿತಿ ಸದಸ್ಯರಿಗೆ ಆಯೋಜಿಸಿದ್ದ ತರಬೇತಿ ಕಾಯರ್ಾಗಾರ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ನ್ಯಾಯ ಸಮಿತಿಯಲ್ಲಿ ಕಡ್ಡಾಯವಾಗಿ ಮಹಿಳೆಯರಿಗೆ ಮತ್ತು ಪರಿಶಿಷ್ಟ ಜಾತಿ, ಪಂಗಡಗಳ ಸದಸ್ಯರಿಗೆ ಸ್ಥಾನ ಕಲ್ಪಿಸಲಾಗಿದೆ. ಶೋಷಣೆಗೆ ಒಳಗಾದ ಜನರನ್ನು ರಕ್ಷಿಸುವುದು ಪ್ರಮುಖವಾಗಿ ಮಹಿಳೆಯರ ಸಾಮಾಜಿಕ, ಸಂಸ್ಕೃತಿಕ ಮತ್ತು ಆಥರ್ಿಕ ಅಭಿವೃದ್ಧಿಗೆ ಅನುವು ಮಾಡಿಕೊಡುವುದು ಇದರ ಉದ್ದೇಶವಾಗಿದೆ ಎಂದರು
ಮಹಿಳೆಯರಿಗೆ ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ಕಿರುಕುಳಗಳ ಮತ್ತಿತರ ಅಪರಾಧಗಳ ವಿರುದ್ಧ ರಕ್ಷಣೆ ಒದಗಿಸಲು ಸದಸ್ಯರು ಮುಂದಾಗಬೇಕು. ನಿಮ್ಮ ಪಂಚಾಯಿತಿ ಹಂತದಲ್ಲಿ ನಡೆಯುವ ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪರಿಶಿಷ್ಟ ಜಾತಿ, ಪಂಗಡ ವರ್ಗಕ್ಕೆ ಮೀಸಲಾದ ಕಾಯರ್ಾಕ್ರಮವಾರು ಅನುದಾನದ ಅನುಷ್ಠಾನ, ಮೇಲ್ವಿಚಾರಣೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಂಪನ್ಮೂಲ ವ್ಯಕ್ತಿ ಶಾರದಾ ಅಡಿಕೆ ಮತ್ತು ಹಾಜಿಬಾಬು ಇದ್ದರು.