ಜಿಲ್ಲೆ

ಸಾಮಾಜಿಕ ನ್ಯಾಯದ ಸದ್ಬಳಕೆ ಮಾಡಿಕೊಳ್ಳಿ

ಚನ್ನಬಸಯ್ಯ ಗುರುವಿನ

ಯಾದಗಿರಿ : ಗ್ರಾಮೀಣ ಭಾಗದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಪಂಚಾಯಿತಿ ವ್ಯವಸ್ಥೆಯಲ್ಲಿನ ಸೌಲಭ್ಯವನ್ನು ಪ್ರತಿ ಸದಸ್ಯರು ಪಡೆದುಕೊಳ್ಳುವ ಮೂಲಕ ಸಾಮಾಜಿಕ ನ್ಯಾಯ ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಶರಬೈ ಸಲಹೆ ನೀಡಿದರು.

ತಾಪಂ ಸಭಾಂಗಣದಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿ ಸ್ಥಾಯಿ ಸಮಿತಿ ಸದಸ್ಯರಿಗೆ ಮಂಗಳವಾರ ಹಮ್ಮಿಕೊಂಡ ತರಬೇತಿ ಕರ‍್ಯಾಗಾರ ಉದ್ಘಾಟಿಸಿ ಮಾತನಾಡಿ, ಸಾಮಾಜಿಕ ನ್ಯಾಯ ಸಮಿತಿಯಲ್ಲಿ ಮಹಿಳೆಯರು ಮತ್ತು ಪರಿಶಿಷ್ಟ ಜಾತಿ, ಪಂಗಡ ಸದಸ್ಯರಿಗೆ ಸ್ಥಾನ ಕಲ್ಪಿಸಲಾಗಿದೆ. ಶೋಷಣೆಗೆ ಒಳಗಾದ ಜನರನ್ನು ರಕ್ಷಿಸುವುದು, ಅದರಲ್ಲೂ ಪ್ರಮುಖವಾಗಿ ಮಹಿಳೆಯರ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಅನುವು ಮಾಡಿಕೊಡುವುದು ಇದರ ಮೂಲ ಉz್ದೆÃಶವಾಗಿದೆ ಎಂದರು.

ಮಹಿಳೆಯರಿಗೆ ಕೌಟುಂಬಿಕ ಹಿಂಸೆ ಮತ್ತು ಲೈಂಗಿಕ ಕಿರುಕುಳ ಇತರ ಅಪರಾಧಗಳಿಂದ ರP್ಷÀಣೆ ಒದಗಿಸಲು ಸದಸ್ಯರು ಮುಂದಾಗಬೇಕು. ನಿಮ್ಮ ಪಂಚಾಯಿತಿ ಹಂತದಲ್ಲಿ ನಡೆಯುವ ಸಭೆಗಳಲ್ಲಿ ಸಕ್ರಿಯ ಭಾಗವಹಿಸಬೇಕು. ಪರಿಶಿಷ್ಟ ಜಾತಿ, ಪಂಗಡಕ್ಕೆ ಮೀಸಲಾದ ಕರ‍್ಯಕ್ರಮವಾರು ಅನುದಾನದ ಅನುಷ್ಠಾನ, ಮೇಲ್ವಿಚಾರಣೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿ ಶಾರದಾ ಅಡಿಕೆ ಮತ್ತು ಹಾಜಿಬಾಬು ಇದ್ದರು.