filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40; 
ಜಿಲ್ಲೆ

ಸಾಮಾನ್ಯ ಪ್ರವೇಶ ಪರೀಕ್ಷೆ 18, 19ಕ್ಕೆ

ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶದಂತೆ ಏ.18, 19ರಂದು 2 ದಿನ ಸಾಮಾನ್ಯ ಪ್ರವೇಶ (ಸಿಇಟಿ) ಪರೀಕ್ಷೆ ಚಿತ್ರದುರ್ಗದ 14 ಕೇಂದ್ರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ಸಿಇಟಿ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಚುನಾವಣೆ ಕಾರ‌್ಯಗಳಿಗೆ ನಿಯೋಜಿತ ಅಧಿಕಾರಿಗಳನ್ನು ಹೊರತುಪಡಿಸಿ, ಇತರ ಅಧಿಕಾರಿಗಳನ್ನು ಪರೀಕ್ಷೆಗೆ ನೇಮಿಸಬೇಕು ಎಂದರು.
ಬಿಸಿಲ ತಾಪ ಅಧಿಕವಿರುವುದರಿಂದ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಚಿತ್ರದುರ್ಗದ 14 ಪರೀಕ್ಷಾ ಕೇಂದ್ರಗಳಲ್ಲಿ 6456 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಅಕ್ರಮಗಳ ತಡೆಗೆ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಸಾಮಾನ್ಯ ವಸ್ತ್ರ ಸಂಹಿತೆ ಅನ್ವಯಿಸುತ್ತದೆ. ಮೊಬೈಲ್ ಬಳಕೆಗೆ ಅವಕಾಶವಿಲ್ಲ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿ ಸಂಖ್ಯೆ, ಕೊಠಡಿ ವಿವರಗಳಿರುವ ಸೂಚನಾ ಫಲಕಗಳನ್ನು ಮೂರ್ನಾಲ್ಕು ಕಡೆ ಹಾಕಬೇಕು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ಕೊಂಡೊಯ್ಯುವ ಮಾರ್ಗಾಧಿಕಾರಿಗಳ ವಿವರಗಳನ್ನು ಆಯಾ ಕೇಂದ್ರಗಳ ಮುಖ್ಯಸ್ಥರಿಗೆ ಮೊದಲೇ ನೀಡಿರಬೇಕು ಎಂದು ತಿಳಿಸಿದರು.
ನಿಗದಿ ಪಡಿಸಿದ ವೇಳೆ ಸರಿಯಾಗಿ ಖಜಾನಾಧಿಕಾರಿ ಸಮ್ಮುಖದಲ್ಲಿ ಸ್ಟ್ರಾಂಗ್‌ರೂಮ್‌ಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್‌ಗಳನ್ನು ಮಾರ್ಗಾಧಿಕಾರಿಗಳಿಗೆ ನೀಡಬೇಕು. ಇವುಗಳನ್ನು ಪೊಲೀಸ್ ಭದ್ರತೆಯಲ್ಲಿ ಸರಬರಾಜು ಮಾಡಬೇಕು. ಪ್ರತಿ ಪರೀಕ್ಷಾ ಕೇಂದ್ರದ ಸುತ್ತ ಇಬ್ಬರು ಪೊಲೀಸರನ್ನು ನಿಯೋಜಿಸಬೇಕೆಂದು ಸೂಚಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಪುಟ್ಟಸ್ವಾಮಿ ಮಾತನಾಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಸರಬರಾಜು ಹಾಗೂ ಮರಳಿ ಪಡೆಯಲು ಐದು ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಲಾಗಿದೆ. ವಿಜ್ಞಾನ ವಿಷಯ ಶಿಕ್ಷಕರನ್ನು ಹೊರತುಪಡಿಸಿ ಬೇರೆ ವಿಷಯಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರಾಗಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದ ಅವರಯಮ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಬೇಕು ಎಂದು ಜಿಲ್ಲಾಧಿಕಾರಿ ಅವರಲ್ಲಿ ಕೋರಿದರು.
ತಹಸೀಲ್ದಾರ್ ಡಾ.ನಾಗವೇಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಮತ್ತಿತರರು ಇದ್ದರು.

*ವೇಳಾಪಟ್ಟಿ
ಏ.18ರ ಬೆಳಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತಶಾಸ್ತ್ರ. 19ರ ಬೆಳಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ ವಿಷಯ ಪರೀಕ್ಷೆಗಳು ನಡೆಯಲಿವೆ.