ಜಿಲ್ಲೆ

ಸಾಮಾನ್ಯರಿಗೂ ಇಷ್ಟವಾಗುತ್ತಿವೆ ನಮೋ ನಿರ್ಧಾರಗಳು

ಆಲೂರು: ನರೇಂದ್ರ ಮೋದಿ ಅವರು ಈ ದೇಶದ ಮಹಾನ್ ಶಕ್ತಿ. ಅವರ ಜನ್ಮದಿನದ ಶುಭ ಸಂದರ್ಭದಲ್ಲಿ ಮಂಡಲ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿರುವುದು ಅತ್ಯಂತ ಶ್ಲಾಘನೀಯ ಎಂದು ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿರುವ ಶಾಸಕರ ಕಚೇರಿ ಮುಂಭಾಗ ಬಿಜೆಪಿ ಮಂಡಲದ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ಆಯೋಜಿಸಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಮಾತನಾಡಿದರು.

ನರೇಂದ್ರ ಮೋದಿ ಅವರು ಜನಧನ್ ಯೋಜನೆ, ಕೃಷಿ ಸಮ್ಮಾನ್, ಉಜ್ವಲ ಯೋಜನೆ ಸೇರಿದಂತೆ ಇತರ ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ದೇಶದ ಜನತೆಗೆ ಉತ್ತಮ ಆಡಳಿತ ನೀಡಿದ್ದಾರೆ. ದೇಶದ ಎಲ್ಲ ವರ್ಗಗಳಿಗೆ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ. ಇಂದು ಅಮೆರಿಕದಂತಹ ದೇಶವೇ ನಮ್ಮ ದೇಶದ ಮುಂದೆ ತಲೆಬಾಗುತ್ತಿದೆ. ಇಂತಹ ಪ್ರಧಾನಿಯನ್ನು ಪಡೆದಿರುವ ದೇಶದ ಪ್ರಜೆಗಳು ಪುಣ್ಯವಂತರು. ಮೋದಿ ಅವರು ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ದೇಶ ರಕ್ಷಣೆಗೆ ಅವರು ಕೈಗೊಳ್ಳುವ ನಿರ್ಧಾರಗಳು ಸಾಮಾನ್ಯ ಜನರಿಗೂ ಇಷ್ಟವಾಗುತ್ತಿವೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಸುಭದ್ರ ಆಡಳಿತ ನೀಡುವ ಮೂಲಕ ಎಲ್ಲ ವರ್ಗದ ಜನರಿಗೂ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡಿದ್ದು, ಅವರ ಹುಟ್ಟುಹಬ್ಬವನ್ನು ಸೇವಾ ಕಾರ್ಯಗಳ ಮೂಲಕ ತಾಲೂಕು ಮಂಡಲ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ನಾಯಕತ್ವ ಎಂಥದ್ದು ಎಂಬುದನ್ನು ಬರೀ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನೋಡಿದೆ ಪ್ರಧಾನಿ ಮೋದಿ ಅವರು ಅಧ್ಯಯನಶೀಲವಾಗಿ, ಏಕಾಗ್ರತೆಯಿಂದ ಮತ್ತು ಒಂದು ತಪಸ್ಸಿನಂತೆ ದೇಶವನ್ನು ಆಳುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುಮಾರು 103 ಕಾರ್ಯಕರ್ತರು ರಕ್ತದಾನ ಮಾಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಉಮಾ ರವಿಪ್ರಕಾಶ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಅಬ್ಬನ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೂವಯ್ಯ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ನೇತ್ರಾವತಿ ಮಂಜುನಾಥ್, ಬಿಜೆಪಿ ಮಾಜಿ ಅಧ್ಯಕ್ಷರಾದ ನಾಗರಾಜು ಹುಲ್ಲಳ್ಳಿ, ಲೋಕೇಶ್ ಕದಾಳು, ಮುಖಂಡರಾದ ಅಜಿತ್ ಚಿಕ್ಕಣ್ಗಾಲು, ಲೋಕೇಶ್ ಕಣಗಾಲು, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ನಂಜುಂಡಪ್ಪ, ರವಿ ಅಂಜಳಿಗೆ, ಹೇಮಂತ್, ನಟರಾಜ್ ಸೋಂಪುರ ಇತರರು ಉಪಸ್ಥಿತರಿದ್ದರು.