ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸರು ಸಾರ್ವಜನಿಕ ಕುಂದು ಕೊರತೆಗಳ ಸಭೆ ನಡೆಸಿದರು. ಶಶಿಕುಮಾರ್, ಗುರುಪ್ರಸಾದ್, ಕೃಷ್ಣೇಗೌಡ, ಆರ್.ಹೇಮಂತರಾಜು, ಎನ್.ಪಿ.ನವೀನ್ ಕುಮಾರ್, ರವಿ ನಾಯಕ್ ಇದ್ದರು. 
ಜಿಲ್ಲೆ

ಸಾರ್ವಜನಿಕರ ಕುಂದುಕೊರತೆಗಳ ಸಭೆ

ಗುಂಡ್ಲುಪೇಟೆ: ಲೋಕಾಯುಕ್ತ ಪೊಲೀಸರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸಾರ್ವಜನಿಕ ಕುಂದು ಕೊರತೆಗಳ ಸಭೆ ನಡೆಸಿ ಕಾಲಮಿತಿಯಲ್ಲಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಲೋಕಾಯುಕ್ತ ಇನ್ಸ್‌ಪೆಕ್ಟರ್ ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಸ್ತೆ ಸಮಸ್ಯೆ, ಇ-ಸ್ವತ್ತು ಸಮಸ್ಯೆಗಳ ಬಗ್ಗೆ ನಾಲ್ಕು ದೂರುಗಳು ಬಂದಿದ್ದವು. ಸಂಬಂಧಿಸಿದ ಕಂದಾಯ, ಸರ್ವೇ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನು ಕರೆದು ಕಾಲಮಿತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಯಿತು.

ಲೋಕಾಯುಕ್ತ ಸಿಬ್ಬಂದಿ ಗುರುಪ್ರಸಾದ್, ಕೃಷ್ಣೇಗೌಡ, ಪುರಸಭೆ ಮುಖ್ಯಾಧಿಕಾರಿ ಆರ್.ಹೇಮಂತರಾಜು, ಬಫರ್ ವಲಯದ ಆರ್ ಎಫ್‌ಒ ಎನ್.ಪಿ.ನವೀನ್ ಕುಮಾರ್, ಭೂಮಾಪನಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯಕ್ ಇದ್ದರು.