ಜಿಲ್ಲೆ

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ


ಯಾದಗಿರಿ: ಗ್ರಾಮೀಣ ಪ್ರದೇಶದಿಂದ ಸಾರ್ವಜನಿಕರು ಕಚೇರಿಗೆ ಬಂದರೆ ಸ್ಪಂದಿಸಿ, ಇಲಾಖಾವಾರು ಹಂಚಿಕೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಶಹಾಪುರದ ತಾಪಂ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರಕಾರದ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪುವ ಹಾಗೆ ಜಾಗೃತಿ ವಹಿಸಿ. ಸಮಸ್ಯೆಗಳು ಕಂಡು ಬಂದಲ್ಲಿ ಸಂಬಂಸಿದವರ ಗಮನಕ್ಕೆ ತಂದು ಪರಿಹರಿಸಿ ಎಂದ ಅವರು, ಶಕ್ತಿ ಯೋಜನೆ ಜಾರಿಯಿಂದ ತಾಲೂಕಿನಲ್ಲಿ ಶೇ.40 ರಷ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಪ್ರತಿದಿನ ಶಹಾಪುರ ಘಕಟದ ಬಸ್ಗಳಲ್ಲಿ 7 ಸಾವಿರ ಪ್ರಯಾಣಿಕರು ಸಂಚರಿಸುತ್ತಿದ್ದಾರೆ ಎಂದರು.

ತಾಲ್ಲೂಕಿನಾದ್ಯಂತ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ತಿಳಿಸಿದ ಸಚಿವರು, ಕೆಲವು ಗ್ರಾಮಗಲ್ಲಿ ಕೆಟ್ಟುನಿಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರದಲ್ಲೇ ರಿಪೇರಿ ಮಾಡಿಸಿ ಜನರಿಗೆ ಶುದ್ಧ ನೀರು ದೊರಕಿಸಲು, ಆ ನಿಟ್ಟಿನಲ್ಲಿ ಇದೇ ಆ. 27 ರಂದು ಎಲ್ಲ ಪಿಡಿಒಗಳ ಸಭೆ ಕರೆದು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲು ತಾಪಂ ಇಒಗೆ ಸೂಚಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಲೋಕೋಪಯೋಗಿ ಇಲಾಖೆ, ಭೂ ಸೇನಾ ನಿಗಮ ಹಾಗೂ ನಿಮರ್ಿತಿ ಕೇಂದ್ರದ ಅಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಸಮಸ್ಯೆಗಳಿದ್ದರೆ ಸಂಬಂಸಿದವರ ಗಮನಕ್ಕೆ ತಂದು ಶೀಘ್ರ ಪರಿಹರಿಸಬೇಕು. ಅಂಗನವಾಡಿ ಕೇಂದ್ರ ಮತ್ತು ಶಾಲಾ-ಕಾಲೇಜುಗಳ ಕೋಣೆಗಳನ್ನು ದುರಸ್ತಿಗೊಳಿಸಬೇಕು ಎಂದರು.