ಚಿಕ್ಕಮಗಳೂರಿನ ಕೋಟೆ ಬಡಾವಣೆಯ ಮನೆಯೊಂದರಲ್ಲಿ ಆರೋಗ್ಯ ಇಲಾಖೆಯ ತಂಡ ಲಾರ್ವ ಸಮೀಕ್ಷೆಯಲ್ಲಿ ತೊಡಗಿರುವುದು.
ಚಿಕ್ಕಮಗಳೂರು: ಜಿಲ್ಲಾದ್ಯಂತ ಡೆಂಘೆ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಸೀಮಾ ತಿಳಿಸಿದರು.
ನಗರದ ಕೋಟೆಬಡಾವಣೆಯಲ್ಲಿ ನಡೆದ ಲಾರ್ವಾ ಸಮೀಕ್ಷೆ ವೇಳೆ ಭೇಟಿ ನೀಡಿದ ಮಾತನಾಡಿದ ಅವರು, ಮನೆಯ ಸುತ್ತಮುತ್ತ ಸೊಳ್ಳೆ ಉತ್ಪತ್ತಿ ಆಗುವಂತೆ ನೀರು ನಿಲ್ಲಲು ಬಿಡಬಾರದು. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸಬೇಕು ಮತ್ತು ಜ್ವರ ಬಂದ ಸಂದರ್ಭದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದುಕೊಳ್ಳುವಂತೆ ಮತ್ತು ಡೆಂಘೆ ನಿಯಂತ್ರಣ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಳಗೊಂಡಂತೆ ತಂಡಗಳನ್ನಾಗಿ ಮಾಡಿ ಲಾರ್ವಾ ಸಮೀಕ್ಷೆ ನಡೆಸಲಾಗುತ್ತಿದ್ದು, ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಬಗ್ಗೆ ಅರಿವನ್ನು ಮೂಡಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜೆ.ಎನ್.ಬೇಬಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಯಣ್ಣ, ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನವೀನ್ ಮತ್ತು ಶ್ರೀನಿಧಿ, ಪ್ರಾಥಮಿಕ ಆರೋಗ್ಯ ಸುರಕ್ಷಾತಾಧಿಕಾರಿಗಳಾದ ಚಂದನ ಮತ್ತು ವೀಣಾ ಭಾಗವಹಿಸಿದ್ದರು.
ಚಿಕ್ಕಮಗಳೂರಿನ ಕೋಟೆ ಬಡಾವಣೆಯ ಮನೆಯೊಂದರಲ್ಲಿ ಆರೋಗ್ಯ ಇಲಾಖೆಯ ತಂಡ ಲಾರ್ವ ಸಮೀಕ್ಷೆಯಲ್ಲಿ ತೊಡಗಿರುವುದು.