filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37; 
ಜಿಲ್ಲೆ

ಸಾರ್ವಜನಿಕರು ಸೂಚನಾ ಕ್ರಮಗಳನ್ನು ಪಾಲಿಸಿ

ಚಾಮರಾಜನಗರ:ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳು ಅಂದರೆ ಡಿ. 3ರಂದು ಹಳದಿ ಮುನ್ಸೂಚನೆ (ಯೆಲ್ಲೋ ಅಲರ್ಟ್) ಹಾಗೂ ಡಿ.4 ರಂದು ಹೆಚ್ಚು ಮಳೆಯಾಗುವ ಬಗ್ಗೆ ಭಾರತೀಯ ಹವಮಾನ ಇಲಾಖೆಯು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮವಹಿಸಬೇಕಿದ್ದು, ಸಾರ್ವಜನಿಕರು ಮುಂದಿನ ಎರಡು ದಿನಗಳು ಅಥವಾ ಮಳೆ ಕಡಿಮೆಯಾಗುವವರೆಗೆ ಹಲವು ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರವಹಿಸಬೇಕು. ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳ, ಕೆರೆ-ಕಟ್ಟೆಗಳಿಗೆ ತೆರಳಬಾರದು. ಗಣಿಗಾರಿಕೆ ಪ್ರದೇಶಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಗಣಿಗಾರಿಕೆ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ವಹಿಸಬೇಕು. ಮಳೆಯಿಂದಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಗುಡ್ಡ ಕುಸಿತು ಉಂಟಾಗುವ ಸಂಭವವಿರುವುದರಿಂದ ಸಾರ್ವಜನಿಕರು ಎಚ್ಚರವಹಿಸಬೇಕು. ಶಿಥಿಲವಾಗಿರುವ ಮನೆಗಳಲ್ಲಿ ವಾಸವಾಗಿರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳ ಬಳಿ ತೆರಳದಂತೆ ಎಚ್ಚರವಹಿಸಬೇಕು. ವಿದ್ಯುತ್ ಕಂಬಗಳು, ತಂತಿಗಳು ಬಾಗಿಕೊಂಡಿದ್ದಲ್ಲಿ ಅಥವಾ ಬಿದ್ದು ಹೋಗಿದ್ದಲಿ ಕೂಡಲೇ ಮಾಹಿತಿ ನೀಡಬೇಕು.

ಸೂಚನೆಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. ಯಾವುದೇ ಮಾಹಿತಿಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ದೂ.ಸಂ 08226-223160/61/63 ವಾಟ್ಸ್ ಆಪ್ ಸಂಖ್ಯೆ 9740942901 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.