ಜಿಲ್ಲೆ

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ


ಸರಗೂರು: ಸಾರ್ವಜನಿಕರು ಸರ್ಕಾರಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ ಬಿ ಮಟಕೆರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐನೂರು ಮಾರಿಗುಡಿ ವಲಯದ ಕಲ್ಕೆರೆ ಕಚೇರಿ ಮುಂಭಾಗ ಸೋಮವಾರ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದ ಬಳಿಕ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಬೇಕು. ಸರ್ಕಾರದಿಂದ ಬರುವ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಇಲಾಖೆಗೆ ಬೇಕಿರುವ ಸೌಲಭ್ಯಗಳ ಬಗ್ಗೆ ಶೀಘ್ರವೇ ಪಟ್ಟಿ ನೀಡಬೇಕು. ರೈತರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಹಕ್ಕುಪತ್ರ ನೀಡಬೇಕು. ಕೆಇಬಿ ಅಧಿಕಾರಿಗಳ ವಿರುದ್ಧ ಹಲವು ದೂರುಗಳು ಬಂದಿವೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ನೀಡುವುದು ಕಂಡುಬಂದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅರಣ್ಯ ಇಲಾಖೆ ಸೇರಿದಂತೆ ಇತರ ಕೆಲ ಇಲಾಖೆಯವರು ತಮ್ಮ ಕೆಳಮಟ್ಟದ ಅಧಿಕಾರಿಗಳನ್ನು ಸಭೆಗೆ ಕಳುಹಿಸಿದ್ದರಿಂದ ಅಸಮಾಧಾನಗೊಂಡ ಶಾಸಕರು, ಇಲಾಖೆಯ ಉನ್ನತ ಅಧಿಕಾರಿಗಳೇ ಸಭೆಗೆ ಹಾಜರಿರಬೇಕು. ಇದೇ ರೀತಿ ಮುಂದಿನ ಸಭೆಗೆ ಗೈರಾದಲ್ಲಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಉಮೇಶ, ಗ್ರಾಪಂ ಸದಸ್ಯರಾದ ಬೆಟ್ಟಸ್ವಾಮಿ, ವೆಂಕಟರಾಮು, ಪ್ರಕಾಶ್, ಹೇಮಾಜಿ ನಾಯಕ, ನಾಗೇಂದ್ರ, ಕ್ಯಾತ, ತಾಲೂಕು ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಮಣಿಕಂಠ, ಮುಖಂಡರಾದ ಬೀಮರಾಜು, ಹರಿದಾಸ್, ಮಾದಪ್ಪ, ಜಿ.ಕೃಷ್ಣಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದರಾಜು, ಗ್ರಾಮೀಣ ಮಹೇಶ್, ಉದಯಕುಮಾರ್, ನಾಗರಾಜು, ಮಣಿ, ನಾಗೇಂದ್ರ, ನಂಜನಾಯಕ, ಭವನೇಶ್, ಕೆಂಡಗಣ್ಣಸ್ವಾಮಿ, ಹೆಡಿಯಾಲ ವಲಯ ಅರಣ್ಯಾಧಿಕಾರಿ ಪುಟ್ಟರಾಜು, ನಾರಾಯಣ, ನಿವೇದಿತಾ, ಸೆಸ್ಕ್ ಅಧಿಕಾರಿ ದೀಪಕ್ ಇತರರು ಇದ್ದರು.