ಜಿಲ್ಲೆ

ಸಾಲ ಕೊಡಿಸುವುದಾಗಿ ಹೇಳಿ ವಂಚನೆ

ಹಾಸನ: ಪರ್ಸನಲ್ ಲೋನ್ ಕೊಡಿಸುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿ ಆನ್‌ಲೈನ್ ಮೂಲಕ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತ ವ್ಯಕ್ತಿಗೆ 9038811657 ಮೊಬೈಲ್ ಸಂಖ್ಯೆಯಿಂದ ಆ.27ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ ಪರ್ಸನಲ್ ಲೋನ್ ಕೊಡಿಸುವುದಾಗಿ ಹೇಳಿ ನಂಬಿಸಿದ್ದಾನೆ. ಆ ಬಳಿಕ ಲೋನ್ ಪ್ರೋಸೆಸಿಂಗ್ ಚಾರ್ಜ್ ಕಟ್ಟಬೇಕು ಎಂದು ಹೇಳಿದ್ದಾನೆ. ವಂಚಕನ ಮಾತು ನಂಬಿದ ಸಂತ್ರಸ್ತ ಗೂಗಲ್ ಪೇ ಮೂಲಕ 92,930 ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾಯಿಸಿದ್ದಾರೆ. ಆ ಬಳಿಕ ವಂಚಕನ ನಂಬರ್ ಸ್ವಿಚ್ಡ್ ಆಫ್ ಆಗಿದ್ದು, ಸಂತ್ರಸ್ತನಿಗೆ ತಾನು ಮೋಸ ಹೋಗಿರುವುದು ಗೊತ್ತಾಗಿದೆ. ಈ ಸಂಬಂಧ ಆ.29ರಂದು ಹಾಸನದ ಸಿಇಎನ್ ಪೊಲೀಸ್ ಠಾಣೆಗೆ ಹಾಜರಾಗಿ ವಂಚಕನನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.