ಜಿಲ್ಲೆ

ಸಾಲ ಯೋಜನೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ, ನೀಟ್ ಮೂಲಕ ಆಯ್ಕೆಯಾಗುವ ವೈದ್ಯಕೀಯ (ಎಂಬಿಬಿಎಸ್), ಬಿಡಿಎಸ್, ಬಿ.ಇ, ಬಿ.ಟೆಕ್. ಬ್ಯಾಚುಲರ್ ಆಫ್ ಆರ್ಕಿಟೆಕ್ಜರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಕೋರ್ಸ್‌ಗಳಿಗೆ ಆಯ್ಕೆಯಾಗಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ವೆಬ್‌ಸೈಟ್ ನಲ್ಲಿ ಮೇ 23 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 305ರ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂ.ಸಂ 08226-222332, ಮೊ.ಸಂ. 8277944210 ನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.