ಚಾಮರಾಜನಗರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತ ಜನಾಂಗದವರಿಗೆ ವಿವಿಧ ಯೋಜನೆಯಡಿಯಲ್ಲಿ ಸಾಲ ಹಾಗೂ ಸಹಾಯಧನ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾವಲಂಬಿ ಸಾರಥಿ, ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ನೇರಸಾಲ, ಶ್ರಮಶಕ್ತಿ ಸಾಲ, ವಿದೇಶಿ ವಿಧ್ಯಾಭ್ಯಾಸ ಸಾಲ, ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪ್ರೋತ್ಸಾಹ ಧನ, ಸಾಂತ್ವನ ಯೋಜನೆ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ರಾಜ್ಯದಲ್ಲಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದವರಾಗಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಮಿತಿ, ವಯಸ್ಸು, ಯೋಜನೆಗಳ ಸಾಲ ಹಾಗೂ ಸಹಾಯಧನ ನಿಗಮದ ನಿಯಮಾನುಸಾರ ನೀಡಲಾಗುತ್ತದೆ. ಮಹಿಳೆಯರಿಗೆ ಕನಿಷ್ಠ ಶೇ. 33ರಷ್ಟು ಆದ್ಯತೆ ಇದೆ. ಶೇ. 5ರಷ್ಟು ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಸೌಲಭ್ಯದಲ್ಲಿ ಮೀಸಲಾತಿ ಇರುತ್ತದೆ.
ಅರ್ಜಿದಾರರು ತಮ್ಮ ವಿಳಾಸದ ದೃಢೀಕರಣಕ್ಕಾಗಿ ಆಧಾರ್ ಪ್ರತಿಯನ್ನು ಸಲ್ಲಿಸಬೇಕು. ಬ್ಯಾಂಕ್ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು. ಅರ್ಜಿಗಳನ್ನು ವೆಬ್‌ಸೈಟ್ ಮೂಲಕ ಅ.16 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು (ಕೊಠಡಿ ಸಂಖ್ಯೆ 305) ಅಥವಾ ದೂ.ಸಂ 08226-222332 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.