ಜಿಲ್ಲೆ

ಸಾಲಸೌಲಭ್ಯ, ಸಹಾಯಧನಕ್ಕೆ ಫಲಾನುಭವಿಗಳ ಆಯ್ಕೆ

ಚಿತ್ರದುರ್ಗ: ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಸೋಮವಾರ ವಿವಿಧ 11 ನಿಗಮಗಳಿಂದ ಪ್ರಸಕ್ತ ಸಾಲಿನಲ್ಲಿ ನಾನಾ ಯೋ ಜನೆಗಳಡಿ ಅನುಷ್ಠಾನಗೊಳಿಸುತ್ತಿರುವ ಸಾಲ, ಸಹಾಯಧನ ಹಾಗೂ ವಿದ್ಯಾರ್ಥಿಗಳ ನೇರ ಶೈಕ್ಷಣಿಕ ಅರ್ಹ ಫಲಾನುಭವಿಗಳ ಆಯ್ಕೆ ನಡೆ ಯಿತು.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 12, ಶೈಕ್ಷಣಿಕ ನೇರ ಸಾಲಕ್ಕೆ 24, ಕರ್ನಾಟಕ ವಿಶ್ವಕರ್ಮ ಸ ಮುದಾಯಗಳ ಅಭಿವೃದ್ಧಿ ನಿಗಮದಿಂದ 19, ಶೈಕ್ಷಣಿಕ ನೇರ ಸಾಲಕ್ಕೆ ಇಬ್ಬರು, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 10 ಹಾಗೂ ಶೈಕ್ಷಣಿಕ ನೇರ ಸಾಲಕ್ಕೆ ನಾಲ್ವರನ್ನು ಆಯ್ಕೆ ಮಾಡಲಾಯಿತು.

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 14, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 25, ಕ ರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 17, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದಿಂದ 27 ಹಾ ಗೂ ಶೈಕ್ಷಣಿಕ ನೇರ ಸಾಲಕ್ಕೆ 4 ಮಂದಿಯನ್ನು ಆಯ್ಕೆ ಮಾಡಲಾಯಿತು.

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 21,ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೇರ ಸಾಲಕ್ಕೆ 25,ಕರ್ನಾಟಕ ಒಕ್ಕಲಿಗ ಸ ಮುದಾಯಗಳ ಅಭಿವೃದ್ಧಿ ನಿಗಮಕ್ಕೆ 31,ಶೈಕ್ಷಣಿಕ ನೇರ ಸಾಲಕ್ಕೆ 10 ಫಲಾನುಭವಿಗಳ ಆಯ್ಕೆ ಮಾಡಲಾಯಿತು.

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 35, ಶೈಕ್ಷಣಿಕ ನೇರ ಸಾಲಕ್ಕೆ ಇಬ್ಬರು ಕರ್ನಾಟಕ ಆರ್ಯ ವೈಶ್ಯಸ ಮುದಾಯಗಳ ಅಭಿವೃದ್ಧಿ ನಿಗಮದಿಂದ 23 ಜನರನ್ನು ಆಯ್ಕೆ ಮಾಡಲಾಯಿತು. ಪ್ರಸಕ್ತ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಯಿತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರನಾಯಕ, ಸಹಕಾರ ಸಂಘಗಳ ಉಪನಿಬಂಧಕ ದಿಲೀಪ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪವಿತ್ರಾ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳಿಸಿಂಗೆ ಮತ್ತಿತರ ಅಧಿಕಾರಿಗಳಿದ್ದರು.