ಬೆಳಗಾವಿ: ವೃತ್ತಿ ಯಾವುದೇ ಇರಲಿ, ವ್ಯಕ್ತಿಯ ಪ್ರವೃತ್ತಿ ತುಂಬ ಮುಖ್ಯ. ಸಾಹಿತ್ಯ&ಸಂಗೀತ&ನಾಟಕಗಳನ್ನು ಪ್ರೀತಿಸುವವರು ಎಲ್ಲಿದ್ದರೂ ಸುಖಿಗಳು. ಎಲ್ಲರಿಗೂ ಒಂದಿಲ್ಲೊಂದು ೇತ್ರದಲ್ಲಿ ಆಸಕ್ತಿಯಿರುತ್ತದೆ. ಆ ಆಸಕ್ತಿ ೂಷಿಸಿಕೊಂಡು ಬೆಳೆಯಬೇಕು ಎಂದು ಸಾಹಿತಿ ಡಾ. ಬಸವರಾಜ ಜಗಜಂಪಿ ಹೇಳಿದರು.
ಕೆಎಲ್ಇ ಶತಮಾನೋತ್ಸವ ಸಭಾಂಗಣದಲ್ಲಿ ಭಾರತೀಯ ವೈದ್ಯಕಿಯ ಸಂ ಕರ್ನಾಟಕ ಶಾಖೆ& ಕನ್ನಡ ವೈದ್ಯ ಬರಹಗಾರರ ಸಮಿತಿ, ಕೆಎಲ್ಇ ವಿಶ್ವವಿದ್ಯಾಲಯದ ಜೆಎನ್ಎಂಸಿ ಕನ್ನಡ ಬಳಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ "ಕನ್ನಡ ವೈದ್ಯ ಬರಹಗಾರರ ಐದನೇ ರಾಜ್ಯ ಸಮ್ಮೇಳನ'ದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದರು.
ಪ್ರಪಂಚದಲ್ಲಿ ಸಾವಿಲ್ಲದ ಏಕಮಾತ್ರ ವಸ್ತುವೆಂದರೆ ಪುಸ್ತಕ. ಪುಸ್ತಕಗಳು ಜಗತ್ತನ್ನು ಆಳುತ್ತವೆ ಎಂಬ ಮಾತು ಕೂಡ ಅಷ್ಟೇ ಗಮನಾರ್ಹ. ವಾಲ್ಮೀಕಿ ಮತ್ತು ಕವಿವ್ಯಾಸರು ಭೌತಿಕವಾಗಿ ನಮ್ಮೊಂದಿಗಿಲ್ಲ. ಆದರೆ, ಅವರು ತಪಸ್ಸಿನ ಫಲವಾಗಿ ಸೃಷ್ಟಿಗೊಂಡ ರಾಮಾಯಣ, ಮಹಾಭಾರತದಂತಹ ಮಹಾನ್ ಗ್ರಂಥಗಳು ತಮ್ಮ ಮೌಲ್ಯದರ್ಶಗಳಿಂದ ಇಂದಿಗೂ ಪರಮಪೂಜ್ಯವಾಗಿವೆ ಎಂದರು.
ಕನ್ನಡ ವೈದ್ಯ ಬರಹಗಾರರ ಸಾಹಿತ್ಯ ಚರಿತ್ರೆಗೆ ತನ್ನದೇ ಆದ ಶ್ರೀಮಂತ ಪರಂಪರೆಯಿದೆ. ಯುವ ಲೇಖಕರು ಆ ಚರಿತ್ರೆಯ ಅಧ್ಯಯನಕ್ಕೆ ಶ್ರದ್ಧೆಯಿಂದ ಒಡ್ಡಿಕೊಳ್ಳಬೇಕು ಎಂದರು. ಬರವಣಿಗೆ ತುಂಬ ಶ್ರಮ ಬೇಡುವ ಕೆಲಸ. ಅದಕ್ಕಾಗಿ ಹೆಚ್ಚೆಚ್ಚು ಓದಬೇಕು. ಸಮಯ ಹೊಂದಿಸಿಕೊಳ್ಳಬೇಕು. ಒಂದಿಷ್ಟು ತ್ಯಾಗ ಮಾಡಬೇಕು. ತ್ಯಾಗದಿಂದ ಮಾತ್ರ ದೊಡ್ಡ ಕೆಲಸಗಳಾಗುತ್ತವೆ ಎಂಬುದು ಅನುಭವದ ಮಾತು. ಅನುಭವವನ್ನು ಅರಕ್ಕಿಳಿಸುವ ವ್ಯಕ್ತಿಗೆ ಅಭಿವ್ಯಕ್ತಿ ಸಾಮರ್ಥ್ಯವಿರಬೇಕು. ತನ್ನಲ್ಲಿರುವ ಸೃಜನಶೀಲತೆ ಸಮರ್ಪಕವಾಗಿ ಬಳಸಿಕೊಂಡು ರಚನೆಗಿಳಿದವರಿಂದ ಒಳ್ಳೆಯ ಕೃತಿಗಳು ಬರುತ್ತವೆ. ಆ ಕೃತಿಗಳು ಸಮಾಜ ತಿದ್ದುವ ಸಾಮರ್ಥ್ಯ ಹೊಂದಿರುತ್ತವೆ ಎಂದರು.
ಕನ್ನಡ ವೈದ್ಯ ಬರಹಗಾರರ ಸಮಿತಿ ಅಧ್ಯೆ ಡಾ.ವೀಣಾ ಸುಳ್ಯ ಆರು ರ್ನಿಣಯ ಮಂಡಿಸಿದರು. ಭಾರತೀಯ ವೈಕೀಯ ಸಂದ ರಾಜ್ಯಾಧ್ಯ ಡಾ. ಶ್ರೀನಿವಾಸ ಎಸ್., ಡಾ. ರವೀಂದ್ರ ಅಣಿಗೋಳ, ಜೆಎನ್ಎಂಸಿ ಪ್ರಾಚಾರ್ಯ ಡಾ.ಎನ್.ಎಸ್.ಮಹಾಂತಶೆಟ್ಟಿ, ಡಾ. ಎಚ್.ಬಿ. ರಾಜಶೇಖರ, ಡಾ. ಅವಿನಾಶ ಕವಿ ವೇದಿಕೆಯಲ್ಲಿದ್ದರು. ಡಾ. ನೇತ್ರಾವತಿ ಕವಿ ನಿರೂಪಿಸಿದರು.
ಆರು ರ್ನಿಣಯಗಳ ಅಂಗೀಕಾರ
1) ಕನ್ನಡ ಸಂ ಮತ್ತು ಕನ್ನಡ ಬಳಗಗಳ ಮೂಲಕ ಕನ್ನಡ ವೈದ್ಯಕಿಯ ಸಾಹಿತ್ಯದ ಬೆಳವಣಿಗೆಗೆ ಕ್ರಮ ವಹಿಸಬೇಕು.
2) ವೈದ್ಯರು ರಚಿಸಿದ ಕಥೆಗಳನ್ನು ಆಹ್ವಾನಿಸಿ, ಪ್ರಾತಿನಿಧಿಕ ಕಥಾ ಸಂಕಲನ ಪ್ರಕಟಿಸಬೇಕು.
3) ವೈದ್ಯಕಿಯ ಸಾಹಿತ್ಯಕ್ಕೆ ಸಂಬಂಧಿಸಿದ ಮಾಹಿತಿ ಪ್ರಕಟಿಸಲು ಪ್ರಸಾರಾಂಗ ಸ್ಥಾಪಿಸಬೇಕು ಮತ್ತು ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳ ಪ್ರಸಾರಾಂಗಗಳ ಸಹಕಾರ ಪಡೆಯಬೇಕು.
4) ವೈದ್ಯಕಿಯ ಗ್ರಂಥಾಲಯಗಳಲ್ಲಿ ಕನ್ನಡ ವೈದ್ಯಕಿಯ ಸಾಹಿತ್ಯವೂ ಲಭಿಸಲು ಕ್ರಮ ವಹಿಸಬೇಕು.
5) ಪಠ್ಯ ಪುಸ್ತಕಗಳಲ್ಲಿ ಆರೋಗ್ಯ ಸಾಹಿತ್ಯಕ್ಕೆ ಒತ್ತು ನೀಡಬೇಕು.
6) ಕನ್ನಡದ ಎಲ್ಲ ವೈದ್ಯ ಬರಹಗಾರರ ಮಾಹಿತಿ ದಾಖಲಿಸುವ ಕೆಲಸವಾಗಬೇಕು.
ವೈದ್ಯ ಸಾಹಿತಿಗಳು ಪರಸ್ಪರ ಮುಖಾಮುಖಿಯಾಗಲು ಇಂಥ ಸಮಾವೇಶಗಳಿಂದ ಮಾತ್ರ ಸಾಧ್ಯ. ಯುವಜನತೆ ಪ್ರತಿಭಾವಂತರು, ಅಷ್ಟೇ ಜಾಣರು. ಅವರ ಆಸಕ್ತಿಯನ್ನು ಕಂಡುಕೊಂಡು, ಆ ನಿಟ್ಟಿನಲ್ಲಿ ರೂಪಿಸುವ ಕೆಲಸ ಆಗಬೇಕು. ಅವರಲ್ಲಿನ ರುಚಿ& ಅಭಿರುಚಿಗಳನ್ನು ಪರಿಷ್ಕರಿಸುವ ಕಾರ್ಯ ಆಗಬೇಕು. | ಡಾ. ಬಸವರಾಜ ಜಗಜಂಪಿ, ಸಾಹಿತಿ