ಶಿರಾ: ದಾವಣಗೆರೆಯ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಜ19ರಂದು ಬೆಳಗ್ಗೆ 9ಕ್ಕೆ ಆಯೋಜಿಸಿರುವ ರಾಜ್ಯಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ ಸಾಂಸತಿಕ ಕಲೋತ್ಸವಕ್ಕೆ ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ಪಾಲ್ಗೊಳ್ಳಬೇಕು ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಹಿಂದುಳಿ ವರ್ಗಗಳ ಪ್ರವರ್ಗ ಒಂದು ಒಕ್ಕೂಟದ ರಾಜ್ಯ ಸಹ ಕಾರ್ಯದರ್ಶಿ ಕಮಲದಾಸ್ ಮನವಿ ಮಾಡಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ, ಸಂತೇಶ ವಿಚಾರ ಗೋಷ್ಠಿ ಮತ್ತು ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ಗೌರವಾಧ್ಯಕ್ಷ ರವಿಚಂದ್ರ ಶೆಟ್ಟಿ ನೇತೃತ್ವದಲ್ಲಿ ಸಮಾರಂಭ ನಡೆಯಲಿದ್ದು, ರಾಜ್ಯ ಅಲೆಮಾರಿ ಮತ್ತು ಅಲೆಮಾರಿ ಜನಾಂಗದ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ವೈ.ಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ. 46 ಜಾತಿ ಜನಾಂಗದ ಅಧ್ಯಕ್ಷರು ಮತ್ತು ಒಕ್ಕೂಟದ ಪದಾಧಿಕಾರಿಗಳು ಹಾಗೂ ಜಿಲ್ಲಾ ಸಮಿತಿಯನ್ನು ಸನ್ಮಾನಿಸಲಾಗುತ್ತದೆ ಎಂದು ಕಮಲದಾಸ್ ತಿಳಿಸಿದರು. ಉಜ್ಜನಕುಂಟೆ ಗ್ರಾಮದ ಪದ್ಮನಾಭ ಶಾಸ್ತ್ರಿ , ಯೋಗರಾಜ್, ಗಂಗಾಧರಪ್ಪ ,ಕೃಷ್ಣಪ್ಪ, ಕೊಲ್ಲೂರಪ್ಪ, ರಂಗನಾಥಪ್ಪ, ದೇವರಾಜ್ ಬರಗೂರು, ಮಂಜಣ್ಣ ಬಡವನಹಳ್ಳಿ ಇದ್ದರು.