filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 43; 
ಜಿಲ್ಲೆ

ಸಾಹಿತ್ಯಕ್ಕೆ ಅನನ್ಯ ಕೊಡುಗೆ

ಕಂಪ್ಲಿ: ವಚನ ಸಾಹಿತ್ಯ ಸಂರಕ್ಷಿಸಿ ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡುವಲ್ಲಿ ಫ.ಗು.ಹಳಕಟ್ಟಿ ಅವರ ಪಾತ್ರ ಮಹತ್ವದ್ದಾಗಿದೆ ಎಂದು ಷಾ.ಮಿಯಾಚಂದ್ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಡಾ.ಬಿ.ಸುನೀಲ್ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ವಚನ ಪಿತಾಮಹ ಫ.ಗು.ಹಳಕಟ್ಟಿ ಜನ್ಮದಿನೋತ್ಸವ-ವಚನ ಸಾಹಿತ್ಯ ಸಂರಕ್ಷಣಾ ದಿನದ ಕಾರ್ಯಕ್ರಮದಲ್ಲಿ ಬುಧವಾರ ಉಪನ್ಯಾಸ ನೀಡಿದರು. ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂಪಾದಿಸಿ, ಪ್ರಕಟಿಸುವಲ್ಲಿ ಫ.ಗು.ಹಳಕಟ್ಟಿ ಅವರು ಜೀವನವನ್ನೇ ಸವೆಸಿದ್ದಾರೆ. ವಚನ ಸಾಹಿತ್ಯ ಮುದ್ರಣಕ್ಕಾಗಿ ಮನೆ ಮಾರಿ ಕನ್ನಡಿಗರಿಗೆ ವಚನ ಸಾಹಿತ್ಯ ಒದಗಿಸಿದ್ದಾರೆ. ಹಳಕಟ್ಟಿ ಅವರ ಅನನ್ಯ ಕೊಡುಗೆಯಿಂದಾಗಿ ವಚನ ಸಾಹಿತ್ಯ ಕನ್ನಡಿಗರಿಗೆ ಸರಳವಾಗಿ ದೊರಕಲು ಸಾಧ್ಯವಾಗಿದೆ ಎಂದರು.

ತಹಸೀಲ್ದಾರ್ ಜೂಗಲ ಮಂಜುನಾಯಕ ಮಾತನಾಡಿ, ವಚನ ಸಾಹಿತ್ಯ ಸಮಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಿದೆ. ವಚನ ಸಾಹಿತ್ಯ ಕೇವಲ ಔಪಚಾರಿಕ ಭಾಷಣದ ಸರಕಾಗದೆ ನಿತ್ಯ ಜೀವನದಲ್ಲಿ ಹಾಸು ಹೊಕ್ಕಾಗಬೇಕಿದೆ ಎಂದರು.

ಉಪ ತಹಸೀಲ್ದಾರ್ ಬಿ.ರವೀಂದ್ರಕುಮಾರ್, ಶಿರಸ್ತೇದಾರ್ ಎಸ್.ಡಿ.ರಮೇಶ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಪ್ರಕಾಶ್, ಪ್ರಮುಖರಾದ ಕೆ.ಎಂ.ಹೇಮಯ್ಯಸ್ವಾಮಿ, ಎಸ್.ಡಿ.ಬಸವರಾಜ, ಪಾಮಯ್ಯ ಶರಣ, ಎಲಿಗಾರ ವೆಂಕಟರೆಡ್ಡಿ, ಬಿ.ಎಂ.ರುದ್ರಯ್ಯ, ಅಶೋಕ ಕುಕನೂರು, ಟಿ.ಎಂ.ನಿರಂಜನಸ್ವಾಮಿ, ಸಜ್ಜೇದ ವೀರಭದ್ರಪ್ಪ, ವಿಎಒ ಲಕ್ಷ್ಮಣನಾಯ್ಕ. ಮಾಲತೇಶ ದೇಶಪಾಂಡೆ ಇತರರಿದ್ದರು.