ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ  
ಜಿಲ್ಲೆ

ಸಿ.ಟಿ.ರವಿ ಅವರ ಮಾತು ತಿರುಚಿದ ಕಾಂಗ್ರೆಸ್

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮೆಡಿಕಲ್ ಕಾಲೇಜಿಗೆ ಭೇಟಿನೀಡಿದ್ದ ಸಂದರ್ಭದಲ್ಲಿ ಡೀನ್ ಗೈರು ಹಾಜರಾಗಿದ್ದಕ್ಕೆ ಅಸಮಾಧಾನಗೊಂಡು ಮಾತನಾಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಸಿ.ಟಿ.ರವಿ ಅವರ ಮಾತನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸಮರ್ಥಿಸಿಕೊಂಡರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ.ರವಿ ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್‌ನವರು ಕುತಂತ್ರದಿAದ ಈ ರೀತಿ ವಿಡಿಯೋ ಹರಿಬಿಡುವ ಮೂಲಕ ತೇಜೋವಧೆಗೆ ಯತ್ನಿಸಿರುವುದು ಖಂಡನೀಯ ಎಂದರು.

ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಕಡೂರಿನಲ್ಲಿ ಮಾಜಿ ಶಾಸಕರ ಸಂಬAಧಿಕರ ಮೇಲೆ ಹಲ್ಲೆ, ಬಸರೀಕಟ್ಟೆಯಲ್ಲಿ ಮಹಿಳೆ ಮೇಲೆ ದೌರ್ಜನ್ಯ, ರಾಜ್ಯದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಆದರೆ ಗೃಹ ಸಚಿವರು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರದ ಕಮಿಷನ್ ಕಾಟಕ್ಕೆ ೭ ಅಧಿಕಾರಿಗಳು, ೨೦ ನೌಕರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರೂಣಹತ್ಯೆ ಪ್ರಕರಣ ಹೆಚ್ಚಾಗಿವೆ. ಸೈಬರ್ ವಂಚನೆ ಪ್ರಕರಣಗಳು ಮಿತಿಮೀರಿವೆ. ಸೈಬರ್ ಕ್ರೈಂನಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ಸಚಿವ ಪ್ರಿಯಾಂಕ ಖರ್ಗೆ ಆಪ್ತ ನಿಷೇಧಿತ ಡ್ರಗ್ ಪ್ರಕರಣದಲ್ಲಿ ಸಿಲುಕಿದ್ದು, ಈ ಬಗ್ಗೆ ಸಚಿವರು ಬಾಯಿ ಬಿಡಲಿಲ್ಲ. ಕಾಂಗ್ರೆಸ್ ಶಾಸಕರು ಜೈಲಿನಲ್ಲಿರುವುದು ಈ ಸರ್ಕಾರದ ಭ್ರಷ್ಟಾಚಾರಕ್ಕೆ ಪುಷ್ಟಿ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಕೆ.ಎಸ್.ಪುಷ್ಪರಾಜ್, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಮಹಿಳಾ ಮೋರ್ಚಾ ಮುಖಂಡರಾದ ವೀಣಾಶೆಟ್ಟಿ, ಕವಿತಾಶೇಖರ್, ಪ್ರೀತಿ, ರಾಜೇಶ್ವರಿ ಮತ್ತಿತರರಿದ್ದರು.