ಜಿಲ್ಲೆ

ಸಿ.ಮಹದೇಶ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ

ಮೈಸೂರು:ಉದ್ಯಮಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ನಗರಪಾಲಿಕೆ ಮಾಜಿ ಸದಸ್ಯ ಸಿ.ಮಹದೇಶ್ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯನಗರ 2ನೇ ಹಂತದ ನಿವಾಸಿ ಕೃಷ್ಣ ಕಮೀರೆಡ್ಡಿ ನೀಡಿದ ದೂರಿನ ಮೇರೆಗೆ ಪಾಲಿಕೆ ಮಾಜಿ ಸದಸ್ಯ ಸಿ.ಮಹದೇಶ್, ಸಹಚರ ನಾಗು ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋಕುಲಂನಲ್ಲಿನ ವಾಣಿಜ್ಯ ಸಂಕೀರ್ಣದ ಮಳಿಗೆಯಲ್ಲಿ ಕೆಫೆ ಪ್ರಾಂಚೈಸಿ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದಾಗ ಮಹದೇಶ್ ಸಹಚರ ನಾಗು ಬಂದು ನಾನು ಅವ್ವಾ ಮಾದೇಶ್ ಕಡೆಯವರು, ಇಲ್ಲಿ ಬಿಜಿನೆಸ್ ಮಾಡಬೇಕು ಎಂದು 5 ಲಕ್ಷ ರೂ. ನೀಡಬೇಕು, ಇಲ್ಲವಾದರೆ ಬಿಜಿನೆಸ್ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಕ್ಷಣ ಹಣ ನೀಡಲು ಸಾಧ್ಯವಿಲ್ಲದಿರುವುದರಿಂದ ಕಾಲಾವಕಾಶ ಬೇಕು ಎಂದು ಕೇಳಿ ಮತ್ತೆ ಕೆಲಸ ಶುರು ಮಾಡಿದ್ದೆ. ಆದರೆ, ಮೊಬೈಲ್‌ಗೂ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ವ್ಯಾಪಾರ ನಡೆಸಲು ಸೂಕ್ತ ರಕ್ಷಣೆ ನೀಡುವುದರೊಂದಿಗೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.