ಚನ್ನಮ್ಮನ ಕಿತ್ತೂರು: ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ಹಾಗೂ ವಿದ್ಯಾರ್ಥಿಗಳ ಶೆಣಿಕ ಉನ್ನತಿಗಾಗಿ ಜಿಪಂ ಹಾಗೂ ಪದವಿ ಪೂರ್ವ ಶಿಣ ಇಲಾಖೆಯ ಸಹಯೋಗದಲ್ಲಿ ಆರಂಭಿಸಿರುವ 'ಸಿಇಟಿ&ಸಮ್' ಕಾರ್ಯಕ್ರಮದಡಿ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸುತ್ತಿರುವ ಸಿದ್ಧತಾ ಪರೀೆ ಕೇಂದ್ರಕ್ಕೆ ಶನಿವಾರ ಶಾಸಕ ಬಾಬಾಸಾಹೇಬ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಬಾಬಾಸಾಹೇಬ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಸಿಇಟಿ/ನೀಟ್ ಪರೀೆ ಭಯವನ್ನು ಹೋಗಲಾಡಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸಿಇಟಿ&ಸಮ್ ಯೋಜನೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದರು.
ಸರ್ಕಾರಿ ವಿಜ್ಞಾನ ಪಿಯು ಕಾಲೇಜುಗಳ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಎರಡನೇ ಶನಿವಾರ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಲ್ಕನೇ ಶನಿವಾರ ಸಿದ್ಧತಾ ಪರೀೆಗಳನ್ನು ನಡೆಸುವ ಮೂಲಕ ಸಿಇಟಿ&ನೀಟ್ ಪರೀೆಗಳಿಗೆ ಅವರನ್ನು ಸಜ್ಜುಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ತೆಗೆದುಕೊಳ್ಳಬೇಕು ಎಂದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ೂರ್ಪಡೆ, ೇತ್ರ ಶಿಣಾಧಿಕಾರಿ ಸಿ.ವೆ. ತುಬಾಕಿ, ಕಾಲೇಜಿನ ಪ್ರಾಂಶುಪಾಲ ಎಸ್.ಬಿ. ಪೆಂಟೆದ ಹಾಗೂ ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.