ಚಿಕ್ಕಮಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಜವಾಬ್ದಾರಿಯನ್ನು ನೇರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಹಿಸಿಕೊಳ್ಳಬೇಕು. ಜೊತೆಗೆ ಇವರ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.
ಕಾಲ್ತುಳಿತ ಪ್ರಕರಣಕ್ಕೆ ಸಂಬAಧಿಸಿದAತೆ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಮಾಡಬೇಕು. ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಹಾಗೂ ನಿರ್ಲಕ್ಷ ವಹಿಸಿದ್ದರು ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ವಿಧಾನಸೌಧದ ಭದ್ರತಾ ವಿಭಾಗದ ಡಿಸಿಪಿ ಕರಿಬಸವನಗೌಡ ಅವರ ಎಚ್ಚರಿಕೆಯ ನಡುವೆಯೂ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆತುರಾತುರವಾಗಿ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು ಹಾಗೂ ವ್ಯವಸ್ಥಿತ ತಯಾರಿ ಇಲ್ಲದೆ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಿದ್ದೆ ೧೧ ಜನರ ಸಾವಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ, ಪೊಲೀಸ್ ಇಲಾಖೆ, ಕೆಎಸ್‌ಸಿಎ, ಆರ್‌ಸಿಬಿ ಮ್ಯಾನೇಜ್ಮೆಂಟ್ ಹಾಗೂ ಜನರ ಅತಿರೇಕದ ನಡವಳಿಕೆ ಸೇರಿದಂತೆ ಹಲವು ಹಂತಗಳಲ್ಲಿ ಲೋಪವಾಗಿವೆ. ಈ ಪ್ರಕರಣದ ತೀವ್ರತೆಯನ್ನು ಅರಿತು ರಾಜ್ಯ ಸರ್ಕಾರ ಮ್ಯಾಜಿಸ್ಟೆö್ರÃಟ್ ತನಿಖೆ, ನ್ಯಾಯಾಂಗ ತನಿಖೆ, ಸಿಐಡಿ ತನಿಖೆ ಹೀಗೆ ವಿಧ ವಿಧದ ತನಿಖೆಗಳಿಗೆ ಆದೇಶಿಸಿ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳ ತಲೆದಂಡ ಮಾಡಿರುವುದು ಅಕ್ಷಮ್ಯ. ಸಿಎಂ ಸಿದ್ದರಾಮಯ್ಯ ಹಾಗೂ ತಾವೇ ಐಪಿಎಲ್ ಟ್ರೋಫಿ ಜಯಿಸಿದಷ್ಟು ಉಮೇದಿನಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಬೇಜವಾಬ್ದಾರಿತನದ ನಡವಳಿಕೆಗಳನ್ನು ಒಪ್ಪಿಕೊಳ್ಳದಿರುವುದು ದುರಾದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಕರಣಕ್ಕೆ ಸಂಬAಧಿಸಿದAತೆ ಸೂಕ್ತ ತನಿಖೆ ನಡೆಸದೆ ಪ್ರಾಮಾಣಿಕ ಅಧಿಕಾರಿಗಳ ಆತ್ಮಸ್ಥೈರ್ಯ ಕುಂದಿಸುವAತ ಮತ್ತು ಅವರ ಸಾಮರ್ಥ್ಯ ಪ್ರಶ್ನಿಸುವಂತಹ ಅಮಾನತು ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಘಟನೆಗೆ ಸಂಬAಧಿಸಿದAತೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ರಾಕೇಶ್ ಮರಡಿ, ಪ್ರಮುಖರಾದ ನಂದನ್ ಅರೆನೂರು, ತೇಜಸ್ ಕಟ್ಟೆಗದ್ದೆ, ಆದಿತ್ಯ, ಜೀವನ್ ಇದ್ದರು.