ಜಿಲ್ಲೆ

ಸಿಎಂ ನೈತಿಕ ಹೊಣೆ ಹೊರಲಿ

ಕಲಬುರಗಿ: ಹೈಕೋರ್ಟ್ ಮತ್ತು ಜನಪ್ರತಿನಿಧಿ ನ್ಯಾಯಾಲಯ ಆದೇಶಗಳ ಹಿನ್ನೆಲೆಯಲ್ಲಿ ಮೂಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿದ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಜನ ಪ್ರತಿನಿಧಿ ನ್ಯಾಯಾಲಯ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿದೆ. ಹಗರಣ ೧೪ ನಿವೇಶನಕ್ಕೆ ಸೀಮಿತವಲ್ಲ. ೧೪ ನಿವೇಶನಗಳಿದ್ದರೆ, ಇನ್ನೊಂದೆಡೆ ೪ ರಿಂದ ೫ ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿದೆ. ಎಲ್ಲವೂ ತನಿಖೆ ಸಿಬಿಐನಿಂದ ಆಗಬೇಕು ಎಂದು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.