ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ನಗರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು. ಅನಿಲ ಬೆನಕೆ, ಸಂಜಯ ಪಾಟೀಲ, ಸುಭಾಷ ಪಾಟೀಲ, ಮಹಾದೇವಪ್ಪ ಯಾದವಾಡ, ಗೀತಾ ಸುತಾರ, ಡಾ.ವಿಶ್ವನಾಥ ಪಾಟೀಲ, ಮುರುಘೇಂದ್ರಗೌಡ ಪಾಟೀಲ, ಲೀನಾ ಟೋಪಣ್ಣವರ, ಉಜ್ವಲಾ ಬಡವನ್ನಾಚೆ ಇತರರಿದ್ದರು. 
ಜಿಲ್ಲೆ

ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ವಿಠ್ಠಲ ಹಣಮಂತ ಬಾಳೇಕುಂದ್ರಿ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ ಟಕಗಳ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಪ್ರತಿಭಟಿಸಿದರು.

ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಕಾರರು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಉಪಾಧ್ಯ ಅನಿಲ ಬೆನಕೆ ಮಾತನಾಡಿ, ಕಾಂಗ್ರೆಸ್ಸಿಗರು ಸ್ವತ@ ಕಳ್ಳತನ ಮಾಡಿ, ಈಗ ನಮ್ಮ ವಿರುದ್ಧ ಕಿರುಚಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿರುವ ರಾಜ್ಯಪಾಲರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆಂಬ ಭಯ ಸಿಎಂ ಸಿದ್ದರಾಮಯ್ಯ ಅವರನ್ನು ಕಾಡುತ್ತಿದೆ. ಅವರು ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದರು.

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್​ ನಾಯಕರು ಬಾಂಗ್ಲಾ ಮಾದರಿಯಲ್ಲಿ ಪ್ರತಿಭಟಿಸುತ್ತೇವೆಂದು ಹೇಳುತ್ತಿದ್ದಾರೆ. ಬಾಂಗ್ಲಾದೇಶ ಪ್ರಧಾನಿಗೆ ಬಂದ ಪರಿಸ್ಥಿತಿ ಕರ್ನಾಟಕದ ರಾಜ್ಯಪಾಲರಿಗೂ ಬರಬಹುದು ಎಂದು ವಿಧಾನ ಪರಿಷತ್​ ಸದಸ್ಯ ಐವಾನ್​ ಡಿಸೋಜಾ ಹೇಳಿರುವುದು ಖಂಡನೀಯ ಎಂದರು.
ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಈ ಹಿಂದೆ ಬಿ.ಎಸ್​.ಯಡಿಯೂರಪ್ಪ ಮತ್ತು ಬಿಜೆಪಿಯವರು ಭ್ರಷ್ಟಾಚಾರಿಗಳು ಎನ್ನುತ್ತಿದ್ದ ಮತ್ತು ತಾವು ಕಳಂಕರಹಿತ ರಾಜಕಾರಣಿ ಎಂದು ಬೀಗುತ್ತಿದ್ದ ಸಿದ್ದರಾಮಯ್ಯ ಅವರೇ ಈಗ ಹಗರಣದಲ್ಲಿ ಸಿಲುಕಿದ್ದಾರೆ. ಆದರೆ, ನಾನೇ ವಕೀಲ, ನಾನೇ ನ್ಯಾಯಾಧೀಶ ಮತ್ತು ನನ್ನದೇ ನ್ಯಾಯಾಲಯ ಎಂಬಂತೆ ವರ್ತಿಸುತ್ತಿದ್ದಾರೆ. ನನಗೊಂದು ನ್ಯಾಯ ಹಾಗೂ ಮತ್ತೊಬ್ಬರಿಗೊಂದು ನ್ಯಾಯ ಎನ್ನುತ್ತಿದ್ದಾರೆ. ನಿಮಗೆ ನಾಚಿಕೆ ಇದ್ದರೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಒತ್ತಾಯಿಸಿದರು.

ಬಿಜೆಪಿ ಗ್ರಾಮೀಣ ಜಿಲ್ಲಾ ಟಕದ ಅಧ್ಯ ಸುಭಾಷ ಪಾಟೀಲ, ಮಾಜಿ ಶಾಸಕ ಮಹಾದೇವಪ್ಪ ಯಾದವಾಡ, ಪದ ಮಹಾನಗರ ಟಕದ ಅಧ್ಯೆ ಗೀತಾ ಸುತಾರ, ಮುಖಂಡರಾದ ಡಾ.ವಿಶ್ವನಾಥ ಪಾಟೀಲ, ಮುರುಘೇಂದ್ರಗೌಡ ಪಾಟೀಲ, ಲೀನಾ ಟೋಪಣ್ಣವರ, ಉಜ್ವಲಾ ಬಡವನ್ನಾಚೆ, ಮಹಾನಗರ ಪಾಲಿಕೆ ಬಿಜೆಪಿ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.