ಹಾಸನ: ಹಿಂದುಳಿದ ವರ್ಗಗಳ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸಲು ಮತ್ತು ಕುಗ್ಗಿಸಿ, ತೇಜೋವದೆ ಮಾಡಲು ರಾಜ್ಯಪಾಲರ ಮೂಲಕ ನೋಟಿಸ್ ನೀಡಿರುವುದು ಖಂಡನೀಯ ಎಂದು ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಬೀರೇಗೌಡ ಹೇಳಿದರು.
ರಾಜ್ಯಪಾಲರ ಅಧಿಕಾರವನ್ನ ದುರುಪಯೋಗಪಡಿಸಿಕೊಂಡು ಕೇಂದ್ರ ಸರ್ಕಾರ ಸಿದ್ದರಾಮ್ಯ ಅವರ ಹೆಸರಿಗೆ ಮಸಿ ಬೆಳೆಯುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಉತ್ತಮವಾಗಿ ಆಡಳಿತ ನಡೆಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿರುವ ಮುಖ್ಯಮಂತ್ರಿಗಳು ಶೋಷಿತ ಸಮುದಾಯಗಳ ಪರ ಧ್ವನಿಯಾಗಿರು ಅವರ ವಿರುದ್ಧ ಷಡ್ಯಂತ್ರ ನಡೆದಿದೆ. ರಾಜ್ಯಪಾಲರ ನೋಟಿಸ್‌ನ್ನ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟವನ್ನ ಹಮ್ಮಿಕೊಳ್ಳಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.
ಹಿಂದುಳಿದ ವರ್ಗದ ಒಬ್ಬ ದಕ್ಷ ಆಡಳಿತಗಾರನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತಿದ್ದು, ಅವರ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು, ಈಗಾಗಲೇ ತನಿಖೆ ನಡೆಯುತ್ತಿದ್ದರು ಕೂಡ ಏಕೈಕ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ. ಇದನ್ನ ಹಿಂಪಡೆಯದಿದ್ದರೆ ರಾಜ್ಯದಲ್ಲಿ ಹಿಂದುಳಿದ ವರ್ಗ, ದಲಿತರು ,ಅಲ್ಪಸಂಖ್ಯಾತರು ,ಜನಪರ ಸಂಘಟನೆಗಳ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಾಲುಮತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಪುಟ್ಟರಾಜು, ಉಪಾಧ್ಯಕ್ಷ ಸತೀಶ್ ಬಾಬು, ತಾಲೂಕು ತಾಲೂಕು ಅಧ್ಯಕ್ಷ ಕೃಷ್ಣೇಗೌಡ ಹಾಜರಿದ್ದರು