ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ. 1ರಂದು ನಗರದಲ್ಲಿ ಸುಮಾರು 1344 ಕೋಟಿ ರೂ ವೆಚ್ಚದಲ್ಲಿ ಶಂಕುಸ್ಥಾಪನೆ ಮತ್ತು ಶಿಲನ್ಯಾಸ ನೆರವೇರಿಸುವ ಕಾರ್ಯಕ್ರಮ ಲೋಕಸಭಾ ಚುನಾವಣೆಯ ಗಿಮಿಕ್ ಎಂದು ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ದೂರಿದರು.
ಮುಖ್ಯಮಂತ್ರಿಗಳು ಕಾರ್ಯಕ್ರಮ ಮಾಡಿರುವುದು ಸ್ವಾಗತ, ಆದರೆ, ಯಾವ ಯಾವ ಇಲಾಖೆಯಿಂದ ಎಷ್ಟೆಷ್ಟು ಅನುದಾನದಿಂದ ಕಾಮಗಾರಿಯನ್ನು ಮಾಡಲಾಗಿದೆ. ಎಂಬುದನ್ನ ಬಹಿರಂಗಪಡಿಸಬೇಕು ಅಲ್ಲದೆ ಕಾಮಗಾರಿಯು ಪೂರ್ಣಗೊಳ್ಳದೆ ಇರುವಂತಹ ಹಲವು ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಆಲೂರು ಮಿನಿವಿಧಾನಸೌಧ ಮತ್ತು ಸಕಲೇಶಪುರ ಮತ್ತು ಕಟ್ಟಾಯ ಭಾಗದಲ್ಲಿ ಕೆಲ ಕಾಮಗಾರಿಗಳು ಪೂರ್ಣವಾಗಿಲ್ಲ ಆದರೆ ಕೂಡ ಉದ್ಘಾಟಿಸಲಾಗಿದೆ ಅಲ್ಲದೆ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆಗಳು ಇದ್ದರೂ ಕೂಡ ಹಣ ಬಿಡುಗಡೆ ಮಾಡಿಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವಂತಹ ಹಣವನ್ನು ಖರ್ಚು ಮಾಡಲು ಸಾಧ್ಯವಾಗುತ್ತಿಲ್ಲ ಆದರೆ ಅಭಿವೃದ್ಧಿ ಮಾಡಿದ್ದೇವೆ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು
ನಿರುದ್ಯೋಗ ಯುವಕ ಯುವತಿಯರಿಗೆ ಮುಖ್ಯಮಂತ್ರಿಗಳು ಒಂದು ವರ್ಷ ಅವಧಿ ಪೂರ್ಣಗೊಳಿಸಿದವರಿಗೆ ಹಣ ನೀಡುತ್ತಿದ್ದಾರೆ ಇದು 15 ರಿಂದ 20 ವರ್ಷಗಳ ಇಂದ ಉದ್ಯೋಗ ಇಲ್ಲದೆ ಇರುವಂತಹ ಉದ್ಯೋಗ ಖಾತ್ರಿಯನ್ನು ಅವರಿಗೆ ನೀಡಬೇಕು ರಾಜ್ಯದಲ್ಲಿ ಖಾಲಿ ಇರುವಂತಹ ಲಕ್ಷಾಂತರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಇಂದು ಎಂಪಿ ಸಾಧನೆಯ ಪುಸ್ತಕ ಬಿಡುಗಡೆ:ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರ ಐದು ವರ್ಷದ ಸಾಧನೆಗಳ ಪುಸ್ತಕವನ್ನು ಮಾ.6 ಬುಧವಾರ ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಸೇರಿದಂತೆ ಜಿಲ್ಲೆಯ ಜನ ಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.
ಈಗಾಗಲೇ ಲೋಕಸಭಾ ಚುನಾವಣೆಗೆ ಪಕ್ಷ ತಯಾರಿ ನಡೆಸಿದ್ದು ಈಗಾಗಲೇ ಸಂಘಟನೆ ದೃಷ್ಟಿಯಿಂದ ಮತ್ತು ಚುನಾವಣಾ ಉಸ್ತುವಾರಿಗಳನ್ನಾಗಿ ಮಾಜಿ ಸಚಿವರಾದ ಎಚ್.ಡಿ. ರೇವಣ್ಣ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಮತ್ತು ಎಚ್.ಕೆ. ಕುಮಾರಸ್ವಾಮಿ ಅವರನ್ನ ಉಸ್ತುವಾರಿಯನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಜಿಲ್ಲಾ ಜೆಡಿಎಸ್ ವಕ್ತಾರ ಹೊಂಗೆರೆ ರಘು, ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮಾಜಿ ನಗರ ಸಭೆ ಅಧ್ಯಕ್ಷ ಸೈಯದ್ ಅಕ್ಬರ್ ಇತರರು ಇದ್ದರು.