ಜಿಲ್ಲೆ

ಸಿಎಂ ಸಿದ್ದರಾಮಯ್ಯ ಅಗ್ರಗಣ್ಯ ನಾಯಕ

Yadgiri - Laxmikanth Kulkarni


ಯಾದಗಿರಿ: ಸಿಎಂ ಸಿದ್ದರಾಮಯ್ಯ ನಾಯಕತ್ವ ಸದೃಢವಾಗಿದೆ. ಕುರುಬ ಸಮಾಜದ ಅಗ್ರಗಣ್ಯ ನಾಯಕರು ಅವರು. ನಮ್ಮ ಕ್ಷೇತ್ರಕ್ಕೆ ದೊರೆಯಬೇಕಾದ ಅನುದಾನವನ್ನು ನೀಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡುವ ಭರವಸೆ ಇದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

ತಾಲೂಕಿನ ಕಡೇಚೂರು ಗ್ರಾಮದಲ್ಲಿ ದಾಸಶ್ರೇಷ್ಠ ಕನಕದಾಸರ ನೂತನ ಮೂತರ್ಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಲ ದಿನಗಳಿಂದೆ ರೈತರಿಗೆ ಸಮರ್ಪಕವಾದ ವಿದ್ಯುತ್ ನೀಡಿ ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಕೆಲವೇ ಸಮಯದಲ್ಲಿ ಅದಕ್ಕೆ ಪೂರಕವಾದ ಸ್ಪಂದನೆ ನೀಡಿ ನಮ್ಮ ಭಾಗದ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಕನಕರು ಹಾಕಿದ ಮಾರ್ಗದಲ್ಲಿ ಪ್ರತಿಯೊಬ್ಬರು ನಡೆಯಬೇಕು ಅಂದಾಗ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ಅದು ನಿಮ್ಮ ಮನೆಯಿಂದಲೆ ಪ್ರಾರಂಭವಾಗಬೇಕು. ಕುರುಬ ಸಮಾಜದ ಜತೆ ಇತರೆ ಎಲ್ಲ ಹಿಂದುಳಿದ ಸಮಾಜಗಳ ಆಶೀವರ್ಾದದಿಂದ ನಾನು ಚಿಕ್ಕ ವಯಸ್ಸಿನಲ್ಲಿ ಶಾಸಕನಾಗಿದ್ದೇನೆ. ನಮ್ಮ ಕ್ಷೇತ್ರದ ಸರ್ವ ಜನರು ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರಬೇಕಿದೆ. ಜಗತ್ತಿನಲ್ಲಿನ ಎಲ್ಲ ಸಮಸ್ಯೆಗಳಿಗೆ ಶಿಕ್ಷಣದಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯವಿದ್ದು, ಪಾಲಕರು ಎಷ್ಟೇ ಕಷ್ಟವಾದರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವಂತೆ ಸಲಹೆ ನೀಡಿದರು.