ಬಳ್ಳಾರಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ, ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್ ಎತ್ತಿಹಿಡಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಕಾನೂನು ಎಲ್ಲರಿಗೂ ಒಂದೇ, ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಂತರ ಕಾನೂನು ಹೋರಾಟ ನಡೆಸಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯನವರ ಪತ್ನಿಗೆ 14 ಸೈಟು, ಬಡ ಮಹಿಳೆಯರಿಗೆ ಖಾಲಿ ಸೌಟು, ಭ್ರಷ್ಟಾಚಾರ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕಾರ, ನೈತಿಕತೆ ಇಲ್ಲದ ಸಿದ್ದರಾಮಯ್ಯನವರಿಗೆ ದಿಕ್ಕಾರ ಎನ್ನುವ ಘೋಷಣೆಯನ್ನು ಕೂಗುವ ಮೂಲಕ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.