ಬಾಗಲಕೋಟೆ: ಸತ್ಯ, ಪ್ರಮಾಣಿಕತೆ ಆಧಾರದ ಮೇಲೆ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಆದರು ಸಹ ಬಿಜೆಪಿ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತರ ಮಾಡುತ್ತಿದೆ ಎಂದು ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ರಾಜು ಮನ್ನಿಕೇರಿ ಆರೋಪಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿಯೂ ನಿರೀಕ್ಷೆ ಗೆಲವು ಸಾಧಿಸಲಿಲ್ಲ. ಕಾಂಗ್ರೆಸ್ ಏಳಿಗೆ ಸಹಿಸಲು ಸಾಧ್ಯವಾಗದೆ ಹಾಗೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪ್ಪು ಮಸಿ ಬಳೆಯಲು ಇಲ್ಲ ಸಲ್ಲದ ನೆಪ ಒಡ್ಡಿ ಹುನ್ನಾರ ನಡೆಸಿವೆ ಎಂದು ದೂರಿದರು.
ರಾಜ್ಯಪಾಲರು ಕೇಂದ್ರ ಸರ್ಕಾರ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿಯಾಗಿ ಮಾರ್ಪಟ್ಟಿದೆ. ಕುಮಾರಸ್ವಾಮಿ, ಆರ್.ಅಶೋಕ ಅಂತಹ ನಾಯಕರು ದೊಡ್ಡ ಹಗರಣದಲ್ಲಿ ಸಿಲುಕಿದ್ದರು ಥಾವರಚಂದ ಗೆಹ್ಲೋಟ್ ಕಾನೂನು ವಿಚಾರಣೆ, ಪ್ರಕರಣ ದಾಖಲಿಸಲು ಅನುಮತಿ ನೀಡಿಲ್ಲ. ದುರುದ್ದೇಶ ಪೂರ್ವಕವಾಗಿ ಸಿದ್ದರಾಮಯ್ಯ ಅವರ ಮೇಲೆ ಅನುಮತಿ ನೀಡಿದ್ದಾರೆ. ಬಿಜೆಪಿ ಸಂವಿಧಾನದ ಆಶಯಗಾಳಿಗೆ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇವಾದಳ ಅಧ್ಯಕ್ಷೆ ಜಯಪ್ರಕಾಶ ಉತ್ತೂರು ಮಾತನಾಡಿ, ಮುಡಾ ವಿಚಾರದಲ್ಲಿ ಆರೋಪ ಮಾಡುತ್ತಿರುವ ವ್ಯಕ್ತಿಗೆ ಕ್ರಿಮಿನಲ್ ಹಿನ್ನಲೆ ಇದೆ. ಮಾಹಿತಿ ಹಕ್ಕು ಹೋರಾಟಗಾರ ಕ್ರಿಮಿನಲ್ ಪ್ರಕರಣ ದಾಖಲೆ ಇದೆ. ರಾಜ್ಯಪಾಲ ಥಾವರ್‌ಚಂದ ಗೆಹ್ಲೋಟ್ ಯಾವುದೇ ದಾಖಲೆ ಪರಿಶೀಲನೆ ಮಾಡಿಲ್ಲ. ಕುಮಾರಸ್ವಾಮಿ, ಮುರಗೇಶ ನಿರಾಣಿ, ಶಶಿಕಲಾ ಜೊಲ್ಲೆ ಅನುಮತಿ ನೀಡಿಲ್ಲ. ಇದೀಗ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.
ಮುಖಂಡರಾದ ಮುದಕಣ್ಣ ಅಂಬಿಗೇರ, ಪರಮಾನಂದ ಕುಟರಟ್ಟಿ, ಗುರುನಾಥ ಮ್ಯಾಗೇರಿ, ಶಪೀಕ ಬೇಪಾರಿ, ರಾಜು ಮನ್ನಿಕೇರಿ ದ್ದರು.