ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಸಿಐಟಿಯು ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಾಲಾಜಿ ರಾವ್, ಜಯರಾಮ್ ಇತರರು ಇದ್ದರು. 
ಜಿಲ್ಲೆ

ಸಿಐಟಿಯು ಕಾರ್ಯಕರ್ತರ ಪ್ರತಿಭಟನೆ

ಮೈಸೂರು: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ರಾಮಸ್ವಾಮಿ ವೃತ್ತದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಪಡೆದು 75 ವರ್ಷವಾದರೂ ಪೂರ್ಣ ಸ್ವಾತಂತ್ರ್ಯದ ಕನಸು ನನಸಾಗಿಲ್ಲ. ವ್ಯಾಪಕವಾಗಿ ಭ್ರಷ್ಟಾಚಾರ, ಹಸಿವು, ಬಡತನ, ಅಪೌಷ್ಟಿಕತೆ, ಅಸ್ಪೃಶ್ಯತೆಯಂಥ ಸಾಮಾಜಿಕ ಪಿಡುಗು ಇಂದಿಗೂ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕ್ವಿಟ್ ಇಂಡಿಯಾ ಚಳವಳಿ ನೆನಪಿನಲ್ಲಿ ದೇಶದ ಅಖಂಡತೆ, ಸಾರ್ವಭೌಮತ್ವಕ್ಕೆ ಧಕ್ಕೆ ತರಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದ ಇತಿಹಾಸ ತಿರುಚುವ ಪ್ರಯತ್ನ ನಡೆಯುತ್ತಿದ್ದು, ಅಂದಿನ ಹೋರಾಟದಲ್ಲಿ ಭಾಗವಹಿಸದೇ ಇದ್ದ ಮುಸ್ಲಿಂ ಲೀಗ್ ಹಾಗೂ ಹಿಂದು ಮಹಾಸಭಾಗಳು ಪರೋಕ್ಷವಾಗಿ ಸಾಮ್ರಾಜ್ಯಶಾಹಿಗಳ ಪರ ಇದ್ದರು. ಇದು ದೇಶದ ಜನರಿಗೆ ತಿಳಿದಿದೆ ಎಂದು ಕಿಡಿಕಾರಿದರು.

ಸಾಮ್ರಾಜ್ಯಶಾಹಿ ಮತ್ತು ವಸಾಹತುಶಾಹಿ ನೀತಿಗಳು, ಕೋಮುವಾದ ಹೆಚ್ಚಾಗಿದೆ. ಇದರ ವಿರುದ್ಧ ಬಹುತ್ವ ಭಾರತವನ್ನು ಇನ್ನಷ್ಟು ಬಲಪಡಿಸಿ ಹೆಮ್ಮೆಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಬೇಕು ಎಂದು ಆಗ್ರಹಿಸಿದರು. ಸಿಐಟಿಯು ಮುಖಂಡರಾದ ಬಾಲಾಜಿ ರಾವ್, ಜಯರಾಮ್ ಇನ್ನಿತರರು ಇದ್ದರು.