ಜಿಲ್ಲೆ

ಸಿಡಿಲು ಬಡಿದು ಮನೆಗೆ ಹಾನಿ

ಹನೂರು: ತಾಲೂಕಿನ ಶಾಗ್ಯ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಸಿಡಿಲು ಬಡಿದು ಮನೆಯೊಂದು ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾಗ್ಯ ಗ್ರಾಮದಲ್ಲಿ ರಾತ್ರಿ ಗುಡುಗು ಸಹಿತ ಜೋರು ಮಳೆಯಾಗುತ್ತಿತ್ತು. ಈ ವೇಳೆ ಸಿಡಿಲು ಬಡಿದ ಪರಿಣಾಮ ಗ್ರಾಮದ ಶಿವಲಿಂಗೇಗೌಡ ಎಂಬುವರಿಗೆ ಸೇರಿದ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದ್ದು, ಗೃಹೋಪಯೋಗಿ ವಸ್ತುಗಳು ಸುಟ್ಟು ಹಾನಿಯಾಗಿವೆ. ಸದ್ಯ ಶಿವಲಿಂಗೇಗೌಡ ಅವರ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸುದ್ದಿ ತಿಳಿದು ಶನಿವಾರ ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಹಾಗೂ ಆರ್‌ಐ ಶೇಷಣ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯ ಕುಟುಂಬಸ್ಥರಿಂದ ಮಾಹಿತಿ ಪಡೆದು ಪರಿಶೀಲಿಸಿದರು. ಈ ವೇಳೆ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡಲು ಅಗತ್ಯ ಕ್ರಮವಹಿಸುವುದಾಗಿ ಭರವಸೆ ನೀಡಿದರು.