ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದಲ್ಲಿ ಶುಕ್ರವಾರ ಸಿದ್ದಪ್ಪಾಜಿ ಹಾಗೂ ಕಾಲಭೈರವೇಶ್ವರ ಕಂಡಾಯಗಳ ಉತ್ಸವ ವಿಜೃಂಭಣೆಯಿಂದ ಜರುಗಿತು.
ಮೆರವಣಿಗೆ ಅಂಗವಾಗಿ ಗ್ರಾಮದ ಬೀದಿಗಳನ್ನು ತಳಿರು-ತೋರಣದಿಂದ ಸಿಂಗಾರ ಮಾಡಲಾಗಿತ್ತು. ಗ್ರಾಮದ ಕೋಟೆ ಮಾರಿಯಮ್ಮ ದೇಗುಲದ ಬಳಿ ಕಂಡಾಯಗಳನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ದೇವರ ಗುಡ್ಡರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪ್ರತಿ ಕುಟುಂಬದಿಂದ ಮಹಿಳೆಯರು ಹಣ್ಣು, ಕಾಯಿ ನೀಡಿ ಪೂಜೆ ಸಲ್ಲಿಸಿದರು. ಕೆಲವರು ದೇವರ ಗುಡ್ಡರಿಂದ ಆಶೀರ್ವಾದ ಪಡೆದರು. ಮೆರವಣಿಗೆಯುದ್ದಕ್ಕೂ ಯುವಕರು ವಾದ್ಯದ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.