ಜಿಲ್ಲೆ

ಸಿದ್ದರಾಮಯ್ಯ ವಿರುದ್ಧ ಎಚ್‌ಡಿಕೆ ಟೀಕೆ ಹಾಸ್ಯಾಸ್ಪದ

ಮೈಸೂರು: ‘ಸಿದ್ದರಾಮಯ್ಯ ಮೋಜುಗಾರ’ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಾಂಗ್ರೆಸ್ ನಗರ ವಕ್ತಾರ ಎಸ್.ರಾಜೇಶ್ ಕಿಡಿಕಾರಿದರು.


ಸಿದ್ದರಾಮಯ್ಯ ಅವರು ಅನ್ನಭಾಗ್ಯಕ್ಕೆ ಅಕ್ಕಿ ಬಿಡುಗಡೆ, ರಾಷ್ಟ್ರೀಯ ಹೆದ್ದಾರಿಗಳ ಯೋಜನೆಗೆ ನೆರವು ಮೊದಲಾದ ವಿಷಯ ಕುರಿತಂತೆ ದೆಹಲಿಗೆ ಭೇಟಿ ನೀಡಿ ಪ್ರಧಾನಿ, ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿ ಬಂದಿದ್ದಾರೆ. ಆದರೆ, ಎಚ್.ಡಿ. ಕುಮಾರಸ್ವಾಮಿ ಇದನ್ನು ಸಹಿಸದೆ ಟೀಕೆ ಮಾಡುತ್ತಿದ್ದಾರೆ.

ನೈಸ್ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವುದಾಗಿ ಹೇಳುವ ಕುಮಾರಸ್ವಾಮಿ, ಅದರ ಬದಲು ರಾಜ್ಯದ ಅಭಿವೃದ್ಧಿಗಾಗಿ ಸಹಕಾರ ಕೋರಿ ಪ್ರಧಾನಿಯನ್ನು ಭೇಟಿ ಮಾಡಿಲ್ಲ ಏಕೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.