ರಾಮದುರ್ಗ: ರಾಜ್ಯದ ಬಡವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ಯಾಸಿಕ್ಯೂಷನ್ಗೆ ಅನುಮತಿ ನೀಡಿದ್ದು, ಹಿಂಪಡೆದುಕೊಳ್ಳಬೇಕೆಂದು ಒತ್ತಾಯಿಸಿ, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ನೇತತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಪಂ ಆವರಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕೇಂದ್ರ ಸರ್ಕಾರದ ವಿರುದ್ಧ ೂಷಣೆ ಕೂಗುತ್ತ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಮಾತನಾಡಿ, ಕಳಂಕರಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸೇವೆಗಾಗಿ ಶ್ರಮಿಸುತ್ತಿದ್ದಾರೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಕ್ರಮ ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ರಾಜ್ಯಪಾಲರ ಹುದ್ದೆಯನ್ನು ಕೇಂದ್ರ ಸರ್ಕಾರ ರಾಜಕೀಯ ದ್ವೇಷಕ್ಕೆ ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಕೂಡಲೇ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆದುಕೊಳ್ಳಬೇಕು ಇಲ್ಲದೆ ಹೋದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯ ಜಿ.ಬಿ. ರಂಗನಗೌಡ್ರ, ಮುಖಂಡರಾದ ಪ್ರದಿಪ ಪಟ್ಟಣ, ಸುರೇಶ ಪತ್ತೇಪುರ, ರಮೇಶ ಅಣ್ಣಿಗೇರಿ, ಶೇಖರ ಸಿದ್ಲಿಂಗಪ್ಪನವರ, ಶಿವಯೋಗಿ ಚಿಕ್ಕೋಡಿ, ಜಹೂರ್ ಹಾಜಿ, ರಾಜು ಮಾನೆ, ಕಷ್ಣಾ ಪಾಟೀಲ, ಅನಿಕೇತ ಪಟ್ಟಣ, ರಾಮಣ್ಣ ಬೀಡಕಿ, ಅಪ್ಪು ದಿಂಡಿವಾರ, ರಾಜಶೇಖರ ತೋಳಗಟ್ಟಿ, ಹಜರತ್ ಪೆಲವಾನ, ಸಂಗೀತಾ ರಾಯಬಾಗ, ಚಂದ್ರು ಹಕಾಟಿ, ಪೀರು ತಳವಾರ ಇತರರು ಇದ್ದರು.