ಮೈಸೂರು: ಎ ಪ್ಲಸ್ ಪ್ಲಸ್ ನ್ಯಾಕ್ ಮಾನ್ಯತೆ ಪಡೆದಿರುವ ತುಮಕೂರಿಗೆ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯವು ಎಂಜಿನಿಯರಿಂಗ್ ಕಾಲೇಜಿನಲ್ಲಿ ಜಿಲ್ಲೆಯಲ್ಲೇ ಮೊದಲ ಸ್ಥಾನದಲ್ಲಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿ ಸಿಗುತ್ತಿರುವ ತರಬೇತಿ, ಇದಕ್ಕೆ ತಕ್ಕಂತೆ ಸೌಲಭ್ಯಗಳು ಎಲ್ಲದರಿಂದಲೂ ಮುಂಚೂಣಿಯಲ್ಲಿದೆ.
1963ರಲ್ಲಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳಿಂದ ಆರಂಭವಾದ ಸಂಸ್ಥೆಯು ಇದೀಗ ಪ್ರತಿಷ್ಠಿತ ಸಂಸ್ಥೆಗಳ ಸಾಲಿನಲ್ಲಿ ಇದೆ. ಸಿದ್ಧಗಂಗಾ ಎಜುಕೇಷನ್ ಸೊಸೈಟಿ ವತಿಯಿಂದ ನಡೆದುಕೊಂಡು ಬತ್ತಿರುವ ಈ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರತಿ ವರ್ಷ ದಾಖಲಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಇಲ್ಲಿನ ಶಿಕ್ಷಣ ಪೂರೈಸಿದವರು ಉದ್ಯೋಗ ಪಡೆಯುತ್ತಿರುವವರ ಸಂಖ್ಯೆಯೂ ದ್ವಿಗುಣಗೊಳ್ಳುತ್ತಿದೆ. ಈ ಮೂಲಕ ಶಿಕ್ಷಣ ಹಾಗೂ ಉದ್ಯೋಗ ನೀಡುವುದು ಎರಡರಲ್ಲೂ ಹೆಸರುವಾಸಿಯಾಗಿದೆ.
ಸಂಸ್ಥೆಯಲ್ಲಿ ಪ್ರತಿ ವರ್ಷ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಿದ್ದು, ಮುಂಚೂಣಿಯಲ್ಲಿರುವ ಕಂಪನಿಗಳು ಭಾಗವಹಿಸುತ್ತಿದೆ. 2022ರಲ್ಲಿ 1438 ವಿದ್ಯಾರ್ಥಿಗಳು ಉದ್ಯೋಗ ಗಿಟ್ಟಿಸಿಕೊಂಡಿದ್ದಾರೆ. 2023ರಲ್ಲಿ ಸದ್ಯ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಕಳೆದ ಬಾರಿಗಿಂತ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗುವ ನಿರೀಕ್ಷೆ ಇದೆ.
ಮೈಸೂರಿನ ನಂಜರಾಜ ಬಹದ್ದೂರ್ ಛತ್ರದಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ ವಾಹಿನಿಯ ವತಿಯಿಂದ ಶನಿವಾರ ಮತ್ತು ಭಾನುವಾರ ಆಯೋಜಿಸಿರುವ ಎಜುಕೇಷನ್ ಎಕ್ಸ್‌ಪೋದಲ್ಲಿ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ.ಶಿವಸಿದ್ದರಾಮಯ್ಯ ಹಾಗೂ ತಂಡ ಆಸಕ್ತರಿಗೆ ಮಾಹಿತಿ ನೀಡುತ್ತಿದೆ.