ಜಿಲ್ಲೆ

ಸಿದ್ಧಾರೂಢ ಸ್ವಾಮೀಜಿ ಪುಣ್ಯಾರಾಧನೆ

ಬೀದರ್: ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಸೆ. 1 ರಂದು ಸಿದ್ಧಾರೂಢ ಸ್ವಾಮೀಜಿ ಅವರ 94ನೇ ಪುಣ್ಯಾರಾಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಸಾನಿಧ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಬೆಳಿಗ್ಗೆ 10ಕ್ಕೆ ಭಜನೆ, ಬೆಳಿಗ್ಗೆ 11ಕ್ಕೆ ಸಿದ್ಧಾರೂಢರ ರುದ್ರಾಭಿಷೇಕ, ಮಧ್ಯಾಹ್ನ 12ಕ್ಕೆ ಪ್ರವಚನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದ್ಗುರು ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.