ರಾಯಚೂರಿನ ನಗರಸಭೆ ಕಚೇರಿ ಆವರಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನದ ನಿಮಿತ್ತ ಶನಿವಾರ ಪಂಚಪ್ರಾಣ ಪ್ರತಿಜ್ಞೆ ಸ್ವೀಕರಿಸಲಾಯಿತು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ನರಸಿಂಹಲು ಮಾಡಗಿರಿ, ಹೇಮರಾಜ ಅಸ್ಕಿಹಾಳ, ಮಲ್ಲೇಶ ಕೊಲಮಿ, ವಿಶ್ವನಾಥ ಪಟ್ಟಿ ಇದ್ದರು. 
ಜಿಲ್ಲೆ

ಸಿಬ್ಬಂದಿಗಳಿಂದ ಪಂಚಪ್ರಾಣ ಪ್ರತಿಜ್ಞೆ

ರಾಯಚೂರು: ನಗರಸಭೆ ಕಚೇರಿ ಆವರಣದಲ್ಲಿ ಸ್ವಾತಂತ್ರೋತ್ಸವ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನದ ನಿಮಿತ್ತ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಪಂಚಪ್ರಾಣ ಪ್ರತಿಜ್ಞೆ ಬೋಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಗುರುಸಿದ್ಧಯ್ಯ ಹಿರೇಮಠ, ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿ, ಇಂದು ಗಾಂೀಜಿ ಜತೆಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ನರಸಿಂಹಲು ಮಾಡಗಿರಿ, ಹೇಮರಾಜ ಅಸ್ಕಿಹಾಳ, ಮಲ್ಲೇಶ ಕೊಲಮಿ, ವಿಶ್ವನಾಥ ಪಟ್ಟಿ, ಎಂ.ಈರಣ್ಣ, ಎಸ್.ರಾಜು, ರವಿ ದಾದಾಸ್ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.