ಬೀದರ್: ವಿಧಾನ ಪರಿಷತ್ ಅನುದಾನದಲ್ಲಿ ನಗರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಲಾಯಿತು.
ನಗರದ ನೌಬಾದ್ ಹತ್ತಿರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಮುಖ್ಯ ರಸ್ತೆ ವರೆಗಿನ ಸಿಸಿ ರಸ್ತೆ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ ಮಾತನಾಡಿ, ಮುಖ್ಯ ರಸ್ತೆಯಿಂದ ಬಿಜೆಪಿ ಕಚೇರಿ ವರೆಗಿನ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಹೇಳಿದರು.
ಕಾಮಗಾರಿಗಳನ್ನು ಗುಣಮಟ್ಟದಿಂದ ನಡೆಸಬೇಕು ಹಾಗೂ ಕಾಲಮತಿಯಲ್ಲಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳ ನಿಗಾ ವಹಿಸಬೇಕು ಎಂದು ಹೇಳಿದರು.
ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಮೂಲಭೂತ ಸೌಕರ್ಯ ಒದಗಿಸಲು ರಾಜ್ಯದ ಬಿಜೆಪಿ ಸರ್ಕಾರ ಸಾಕಷ್ಟು ಅನುದಾನ ಒದಗಿಸಿದೆ. ಈ ಭಾಗದ ಜನರ ಬೇಡಿಕೆಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಸರ್ವ ಜನರ, ಎಲ್ಲ ಕ್ಷೇತ್ರಗಳ ಅಭಿವೃದ್ಧಿ ನಿಟ್ಟಿನಲ್ಲಿ ಭರಪೂರ್ ಅನುದಾನ ಒದಗಿಸಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರೂ ಆದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವಾನಂದ ಮಂಠಾಳಕರ್, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮಾಜಿ ಶಾಸಕ ಅಮರನಾಥ ಪಾಟೀಲ್, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಕುಶಾಲ ಪಾಟೀಲ್ ಗಾದಗಿ, ನಗರಸಭೆ ಸದಸ್ಯರಾದ ರಾಜಾರಾಮ ಚಿಟ್ಟಾ, ಶಶಿ ಹೊಸಳ್ಳಿ, ಗಣ್ಯರಾದ ರಾಜೇಂದ್ರ ಪೂಜಾರಿ, ಅನೀಲ ಭೂಸಾರೆ, ದತ್ತು ಪಾಟೀಲ್, ಸೋಮನಾಥ ಪಾಟೀಲ್ ಇತರರಿದ್ದರು.