ಸಿಂಧನೂರು ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ರಾಣಿ ಚನ್ನಮ್ಮರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿದರು. ಮಾಜಿ ಸಚಿವ ವೆಂಕಟರಾವ ನಾಡಗೌಡ, ಜೆಡಿಎಸ್ ಅಧ್ಯಕ್ಷ ಬಸವರಾಜ ನಾಡಗೌಡ, ಕಾಂಗ್ರೆಸ್ ಮುಖಂಡ ರಾಜುಗೌಡ ಬಾದರ್ಲಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಇತರರಿದ್ದರು. 
ಜಿಲ್ಲೆ

ಸೀಕುಲಕ್ಕ ಮಾದರಿಯಾದ ಧೀಮಂತೆ

ಸಿಂಧನೂರು: ಅಖಂಡ ಭಾರತದ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ಧೈರ್ಯ- ಸ್ಥೈರ್ಯ ತುಂಬಿ ಬ್ರಿಟಿಷರ ವಿರುದ್ಧ ಧ್ವನಿ ಎತ್ತಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿ ರಾಣಿ ಚನ್ನಮ್ಮ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಮಹಿಳೆ ಕೇವಲ ಕುಟುಂಬ ನಿರ್ವಹಣೆಗೆ ಸೀಮಿತವಲ್ಲ. ವೈರಿಗಳನ್ನು ಸದೆಬಡಿದು ಹೋರಾಡಿದ ವೀರಮಹಿಳೆಯಾಗಿದ್ದಾಳೆ. ಅವರ ಆದರ್ಶಗಳನ್ನು ಮಹಿಳೆಯರು ಪಾಲಿಸುವ ಮೂಲಕ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದರು.

ಮಾಜಿ ಸಚಿವ ಹಾಗೂ ಕೆಒಎಫ್ ಅಧ್ಯಕ್ಷ ವೆಂಕಟರಾವ ನಾಡಗೌಡ ಮಾತನಾಡಿ, ಸ್ವಾತಂತ್ರ್ಯದ ಕಿಡಿ ಹೊತ್ತಿಸಿ, ಸ್ವಾತಂತ್ರ್ಯ, ಸ್ವಾಭಿಮಾನ ಸಹಕಾರ ಮೂರ್ತಿಯಾಗಿ ಚನ್ನಮ್ಮ ತನ್ನ ರಾಜ್ಯದ ರಕ್ಷಣೆಗೆ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆಯಾಗಿದ್ದಾಳೆ. ಇತಿಹಾಸವನ್ನು ಉದಾಹರಣೆಯಾಗಿಟ್ಟುಕೊಂಡು ದೇಶದ ಒಳಿತಿಗಾಗಿ ಎಲ್ಲರೂ ಶ್ರಮಿಸಬೇಕು ಎಂದರು.

ಜೆಡಿಎಸ್ ಅಧ್ಯಕ್ಷ ಬಸವರಾಜ ನಾಡಗೌಡ, ಕಾಂಗ್ರೆಸ್ ಮುಖಂಡ ರಾಜುಗೌಡ ಬಾದರ್ಲಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ನಗರಸಭೆ ಮಾಜಿ ಸದಸ್ಯ ಲಿಂಗರಾಜ ಹೂಗಾರ, ನಗರ ಬ್ಲಾಕ್ ಕಾಂಗ್ರೆಸ್ ಖಾಜಿ ಮಲ್ಲಿಕ್, ಸಮಾಜದ ಗೌರವಾಧ್ಯಕ್ಷ ವೀರಭದ್ರಪ್ಪ ಗಸ್ತಿ, ಕಲ್ಯಾಣಪ್ಪ ಸಾಹುಕಾರ ರೌಡಕುಂದ, ಸಿದ್ರಾಮೇಶ ಮನ್ನಾಪುರ, ಮಲ್ಲಿಕಾರ್ಜುನ ಸಾಹುಕಾರ ಕಲ್ಲೂರು, ಬಸನಗೌಡ ಬುಕ್ಕನಹಟ್ಟಿ, ಶಿವಕುಮಾರ ಉಪ್ಪಲದೊಡ್ಡಿ, ನಾಗರಾಜ ಗಸ್ತಿ, ಅಮರೇಶಪ್ಪ ಹೊಸಮನಿ, ಡಿವೈಎಸ್‌ಪಿ ಬಿ.ಎಸ್.ತಳವಾರ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ಪಿಐ ದುರುಗಪ್ಪ ಇದ್ದರು.