ಕಲಬುರಗಿ: ವಿಧಾನಸಭೆ ಚುನಾವಣೆ ಸೋಲಿನ ಭಯದಲ್ಲಿರುವ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ನಿಯಮ ಉಲ್ಲಂಘಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಸೀರೆಗಳನ್ನು ವಿತರಿಸಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಅರವಿಂದ ಚವ್ಹಾಣ್ ದೂರಿದ್ದಾರೆ.
ಪ್ರಿಯಾಂಕ್ ಸರ್ಕಾರಿ ಕಾರ್ಯಕ್ರಮದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಕೆಲಸ ಮಾಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಸೀರೆ ಹಂಚಿಕೆ ಸಂಬಂಧದ ಚಿತ್ರಗಳನ್ನು ಸಹ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಸೋಲಿನ ಭೀತಿಯಲ್ಲಿ ಶಾಸಕರು ಮತದಾರರಿಗೆ ಆಸೆ, ಆಮಿಷ ತೋರಿಸುತ್ತಿದ್ದಾರೆ. ಆದರೆ ಚಿತ್ತಾಪುರದ ಪ್ರಬುದ್ಧ ಮತದಾರರು ಇದಕ್ಕೆ ಮರಳಾಗುವುದಿಲ್ಲ ಎಂದಿದ್ದಾರೆ.